ಬೆಂಗಳೂರು:ಆರು ತಿಂಗಳ ಹಿಂದಷ್ಟೇ ಬಡ್ತಿ ಪಡೆದ ಪೊಲೀಸ್ ಅಧಿಕಾರಿ ಜೀವನ್ಮರಣ ಹೋರಾಟ ನಡೆಸಿದರೂ ಕೊನೆಗೆ ಸಾವಿಗೆ ಶರಣಾಗುವಂತಾಗಿದೆ. ರಾಜಧಾನಿಯ ಪೊಲೀಸ್ ಇನ್​ಸ್ಪೆಕ್ಟರ್​ ಒಬ್ಬರನ್ನು ಕ್ಯಾನ್ಸರ್ ಬಲಿ ಪಡೆದಿದೆ.
ಬೆಂಗಳೂರಿನ ಪೊಲೀಸ್ ಇನ್​ಸ್ಪೆಕ್ಟರ್ ಧನಂಜಯ್​ ಸಾವಿಗೀಡಾದವರು. 2010ರ ಬ್ಯಾಚ್ ಸಬ್ ಇನ್​​ಸ್ಪೆಕ್ಟರ್ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಧನಂಜಯ್​, ಆರು ತಿಂಗಳ ಹಿಂದಷ್ಟೇ ಇನ್​ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ್ದರು.
ಹಲಸೂರುಗೇಟ್, ಇಂದಿರಾನಗರ ಠಾಣೆಗಳಲ್ಲಿ ಸಬ್ ಇನ್​ಸ್ಪೆಕ್ಟರ್​ ಆಗಿ ಕೆಲಸ ನಿರ್ವಹಿಸಿದ್ದ ಇವರು, ಪ್ರಸ್ತುತ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಇನ್​ಸ್ಪೆಕ್ಟರ್ ಆಗಿದ್ದರು. ಕ್ಯಾನ್ಸರ್​ಪೀಡಿತರಾದ್ದರಿಂದ ಕಳೆದ ಕೆಲ ತಿಂಗಳುಗಳಿಂದ ರಜೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.
ನಿಮ್ಮ ದಾಖಲೆಗಳನ್ನು ನೀಡಿ ಬೇರೆ ಯಾರೋ ಸಿಮ್​ ಪಡೆದಿರಬಹುದು!; ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
