ಬೆಂಗಳೂರು:ಉದ್ಯಮಿ, ಕಾಂಗ್ರೆಸ್​ ಮುಖಂಡ ಯೂಸುಫ್ ಶರೀಪ್​ ಅಲಿಯಾಸ್​ ಕೆಜಿಎಫ್​ ಬಾಬು ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಶಾಕ್​ ನೀಡಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಹೈಗ್ರೌಂಡ್ಸ್​ ಬಳಿ ಇರುವ ರುಕ್ಸಾನಾ ಪ್ಯಾಲೇಸ್​ಗೆ ಬೆಳಗ್ಗೆ 6 ಘಂಟೆ ಸುಮಾರಿಗೆ ದಾಳಿ ಮಾಡಿದ ಅಧಿಕಾರಿಗಳು ಅಪಾರ ಪ್ರಮಾಣದ ಸೀರೆ ಹಾಗೂ ಡಿಡಿಗಳನ್ನು ವಶಕ್ಕೆ ಪಡೆದಿದ್ಧಾರೆ.
ಇನ್ನು ಕೆಜಿಎಫ್​ ಬಾಬು ಮನೆ ಮೇಲೆ ಐಟಿ ದಾಳಿಯಾಗಿರುವ ವಿಷಯ ತಿಳಿದು ಅವರ ನಿವಾಸದ ಬಳಿ ಬೆಂಬಲಿಗರು ಹಾಗೂ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ತಮ್ಮ ನಾಯಕನ ಪರ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಅಭಿಮಾನಿಯೊಬ್ಬರು ಕೆಜಿಎಫ್ ಬಾಬು ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದು ಅವರು ಎಲ್ಲಿ ಗೆದ್ದು ಬಿಡುತ್ತಾರೋ ಎಂಬ ಭಯದಿಂದ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮೂಲಕ ದಾಳಿ ಮಾಡಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಕೆಜಿಎಫ್​ ಬಾಬು ಮನೆ ಮೇಲೆ ಐಟಿ ದಾಳಿ ಪ್ರಕರಣ; ಸಾವಿರಾರು ಸೀರೆ-ಡಿಡಿ ವಶಕ್ಕೆ

ಹೆಚ್ಚಿನ ಜನರು ಕೆಜಿಎಫ್​ ಬಾಬು ಮನೆ ಬಳಿ ಹೆಚ್ಚಿನ ಜನ ಜಮಾವಣೆಗೊಂಡು ಘೋಷಣೆಗಳನ್ನು ಕೂಗಿದ ಕಾರಣ ಐಟಿ ಅಧಿಕಾರಿಗಳ ಕರ್ತ್ಯವಕ್ಕೆ ಅಡ್ಡಪಡಿಸಿದಂತಾಗುತ್ತದೆ ಎಂದು ಪೊಲೀಸರು ತಿಳಿ ಹೇಳಿದರು.
ಇದಕ್ಕೊಪ್ಪದ ಅಭಿಮಾನಿಗಳು ಹಾಗೂ ಬೆಂಬಲಿಗರು ಘೋಷಣೆಗಳನ್ನು ಕೂಗಲು ಮುಂದುವರೆಸಿದರು. ಈ ವೇಳೆ ಪರಿಸ್ಥಿತಿಯನ್ನು ಹತ್ತೋಟಿಗೆ ತರಲು ಪೊಲೀಸರು ಮಹಿಳೆಯರು, ವೃದ್ದರು ಎಂದು ನೋಡದೆ ಲಾಠಿ ಚಾರ್ಜ್​ ಮಾಡಿದ್ದಾರೆ.

ಕಾಂಗ್ರೆಸ್​ ಪಕ್ಷದಿಂದ ಚಿಕ್ಕಪೇಟೆ ವಿಧಾನಸಬಾ ಕ್ಷೇತ್ರದ ಟಿಕೆಟ್​ ಸಿಗದ ಹಿನ್ನಲೆಯಲ್ಲಿ ಕೆಜಿಎಫ್​ ಬಾಬು ಬುಧವಾರ ಮಧ್ಯಾಹ್ನ 2:00 ಘಂಟೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವವರಿದ್ದರು. ಆದರೆ, ನಾಮಪತ್ರ ಸಲ್ಲಿಕೆಗೂ ಮುನ್ನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅವರ ಮನೆ ಮೇಲೆ ದಾಳಿ ಮಾಡುವ ಮೂಲಕ ಶಾಕ್​ ನೀಡಿದ್ಧಾರೆ.
ಇನ್ನು ಇತ್ತಿಚಿಗೆ ಪಕ್ಷ ವಿರೋಧಿ ಹೇಳಿಕೆ ನೀಡುತ್ತ ಇರುಸು-ಮುರುಸು ಉಂಟು ಮಾಡಿದ ಆರೋಪದ ಮೇಲೆ ಕೆಜಿಎಫ್​ ಬಾಬು ಅವರನ್ನು ಕಾಂಗ್ರೆಸ್​ ಪಕ್ಷದಿಂದ ಉಚ್ಛಾಟಿಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − thirteen =
Remember me
