ಮಂಡ್ಯ:ಸಕ್ಕರೆನಾಡು ಮಂಡ್ಯದಲ್ಲಿ ಪೊಲೀಸರ ತುಪಾಕಿ ಮತ್ತೊಮ್ಮೆ ಸದ್ದು ಮಾಡಿದೆ. 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿ ಶೀಟರ್​ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್​ ಮಾಡಿದ್ದಾರೆ. ಬಂಧಿತನನ್ನು ಮುತ್ತುರಾಜ್​ ಅಲಿಯಾಸ್​ ಡಕ್ಕ ಎಂದು ಹೇಳಲಾಗಿದ್ದು, ಈತನ ವಿರುದ್ಧ ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದಾನೆ.
ಕೊಲೆ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಮುತ್ತರಾಜ್​ನನ್ನು ಬಂಧಿಸಲು ಮಳವಳ್ಳಿ ತಾಲ್ಲೂಕು ಹಲಗೂರು ಹೋಬಳಿಯ  ಚಿಕ್ಕಮಲಗೂಡು ಗ್ರಾಮಕ್ಕೆ ತೆರಳಿದ್ದಾಗ ಪೊಲೀಸ್​ ಪೇದೆ ಸಿದ್ದರಾಜು ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಹಲಗೂರು ಠಾಣೆ ಸಿಪಿವೈ ಶ್ರೀಧರ್ ಆರೋಪಿಗೆ ಸರೆಂಡರ್​ ಆಗುವಂತೆ ಸೂಚಿಸಿದ್ದಾರೆ. ಇದಕ್ಕೊಪ್ಪದೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.
ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮುತ್ತುರಾಜು ಅಲಿಯಾಸ್​ ಡಕ್ಕ, ಕಾಂತರಾಜು ಎಂಬುವರ ಕೊಲೆ ಪ್ರಕರಣ ಆರೋಪಿಯಾಗಿದ್ದಾನೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಸಿಪಿಐ ಶ್ರೀಧರ್​ ತನಿಖೆ ನಡೆಸುತ್ತಿದ್ದರು. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಕಾಂತರಾಜು ಕೊಲೆಗೆ ಮತ್ತುರಾಜ್​ ಅಲಿಯಾಸ್ ಡಕ್ಕ ಸುಪಾರಿ ನೀಡಿರುವುದು ಬಹಿರಂಗವಾಗಿದೆ.
ಇದನ್ನೂ ಓದಿ:ಮತ್ತೊಮ್ಮೆ ಪಾಕ್​ ನರಿ ಬುದ್ದಿ ಬಯಲು; ಸರ್ಕಾರದಿಂದ ಬೆಂಬಲ ಸಿಗದಿದ್ರೂ ಕೂಡ ಕೋಟಿಗಟ್ಟಲೇ ತೆರಿಗೆ ಕಟ್ಟಬೇಕಂತೆ ಚಿನ್ನದ ಹುಡುಗ ನದೀಮ್​
ಚಿಕ್ಕಮಲಗೂಡು ಬಳಿ ರೌಡಿಶೀಟರ್ ಮುತ್ತುರಾಜ್​ ಇರುವ ಮಾಹಿತಿ ದೊರೆತಿತ್ತು. ಮಾಹಿತಿ ಆಧರಿಸಿ ಹಿಡಿಯಲು ಹೋಗಿದ್ದ ವೇಳೆ ಮುತ್ತುರಾಜ್​ ಕಾನ್ಸ್​ಟೇಬಲ್ ಸಿದ್ದರಾಜು​ ಮೇಲೆ ಡ್ಯಾಗರ್​ನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಸಿಪಿಐ ಶ್ರೀಧರ್​ ಆರೋಪಿ ಡಕ್ಕ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.
ಮುತ್ತುರಾಜ್​ ಅಲಿಯಾಸ್​ ಡಕ್ಕ 11 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಮೂರು ಕೊಲೆ, ಮೂರು ಕೊಲೆಗೆ ಯತ್ನ, ಎರಡು ರಾಬರಿ ಸೇರಿ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಹುಡುಗರ ಗುಂಪು ಕಟ್ಟಿಕೊಂಡು ರೌಡಿ ಚಟುವಟಿಕೆಗಳಲ್ಲಿ ಡಕ್ಕ ಭಾಗಿಯಾಗಿದ್ದಾನೆ. ಇದಲ್ಲದೆ ಇಸ್ಪೀಟ್​ ದಂಧೆ ಕೂಡ ನಡೆಸುತ್ತಿದ್ದನು ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
