ತೂಬಗೆರೆ:ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಘಾಟಿ ಕ್ಷೇತ್ರದಲ್ಲಿ ಮಂಗಳವಾರ ಜಿಲ್ಲಾ ಪೊಲೀಸರು ಸುಬ್ರಹ್ಮಣ್ಯಸ್ವಾಮಿಯ ಪಲ್ಲಕ್ಕಿ ಹೊತ್ತು ದೇವಸ್ಥಾನ ಸುತ್ತ ಪ್ರದಕ್ಷಿಣೆ ಹಾಕುವ ಮೂಲಕ ಗಮನ ಸೆಳೆದರು.
ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ವೃತ್ತ ನಿರೀಕ್ಷಕ ಹರೀಶ್, ಮುನಿಕೃಷ್ಣ ಮತ್ತು ಸಿಬ್ಬಂದಿ ಪಲ್ಲಕ್ಕಿ ಮೆರವಣಿಗೆಗೆ ಹೆಗಲು ನೀಡಿದರು.
ಶ್ರೀ ಕ್ಷೇತ್ರ ಘಾಟಿಗೆ ಮಂಗಳವಾರ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾದ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರೇ ಪಲ್ಲಕ್ಕಿ ಉತ್ಸವದ ಸಂಪ್ರದಾಯ ನೆರವೇರಿಸಿದರು. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ದಂಪತಿ ಕೂಡ ಮೆರವಣಿಗೆಯಲ್ಲಿ ಪ್ರದಕ್ಷಿಣೆ ಹಾಕಿದರು. ಬಳಿಕ ದೇಗುಲದ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಖಾಕಿ ವಸ್ತ್ರದಲ್ಲಿದ್ದ ಪೊಲೀಸರ ಪಲ್ಲಕ್ಕಿ ಹೊತ್ತು ಮೆರವಣಿಗೆ ನಡೆಸಿದ ದೃಶ್ಯ ವೀಕ್ಷಿಸಲು ಸಾರ್ವಜನಿಕರು ಮುಗಿಬಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
