ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಕೋವಿಡ್​-19 ಪಿಡುಗು ಜೋರಾಗಿದ್ದರೂ, ಮಾಸ್ಕ್​ ಧರಿಸದೆ, ದೈಹಿಕ ಅಂತರ ಕಾಯ್ದುಕೊಳ್ಳುವುದು ಸೇರಿ ವಿವಿಧ ಸುರಕ್ಷತಾ ಕ್ರಮಗಳನ್ನು ಪಾಲಿಸದ ಆರೋಪದಲ್ಲಿ ಬೆಂಗಳೂರು ನಗರ ಉತ್ತರ ವಿಭಾಗದ ಪೊಲೀಸರು ಶನಿವಾರ 8ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಿದರು.
ಅರ್​.ಟಿ. ನಗರ ಮತ್ತು ಸಂಜಯನಗರದ ಸುತ್ತಮುತ್ತಲ ಪ್ರದೇಶಗಳ ಮದ್ಯದಂಗಡಿಗಳು, ಬಟ್ಟೆಅಂಗಡಿಗಳು ಸೇರಿ 8ಕ್ಕೂ ಹೆಚ್ಚು ಅಂಗಡಿಗಳ ಮೇಲೆ ಬಿಬಿಎಂಪಿಯ ಮಾರ್ಷಲ್​ಗಳೊಂದಿಗೆ ಪೊಲೀಸರು ದಾಳಿ ನಡೆಸಿದರು.
ಇದನ್ನೂ ಓದಿ:ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ
ಈ ಸಂದರ್ಭದಲ್ಲಿ ಮಾಸ್ಕ್​ ಧರಿಸದೆ, ದೈಹಿಕ ಅಂತರ ಕಾಯ್ದುಕೊಳ್ಳದೆ, ಸ್ಯಾನಿಟೈಸರ್​ ವ್ಯವಸ್ಥೆ ಇಲ್ಲದೇ ವ್ಯಾಪಾರ ವಹಿವಾಟು ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಪೊಲೀಸರು ಮತ್ತು ಮಾರ್ಷಲ್​ಗಳ ತಂಡ ಅಲ್ಲಿದ್ದ ಗ್ರಾಹಕರು ಹಾಗೂ ಅಂಗಡಿಗಳ ಮಾಲೀಕರಿಗೆ ಜುಲ್ಮಾನೆ ವಿಧಿಸಿದರು.

ಶುಕ್ರವಾರ ಸಂಜೆ ಕೂಡ ಉತ್ತರ ವಿಭಾಗದ ಪೊಲೀಸರು ಮಲ್ಲೇಶ್ವರದ ಸುತ್ತಮುತ್ತಲಿನ ಚಿನ್ನಾಭರಣ ಮಳಿಗೆಗಳು, ಮದ್ಯದಂಗಡಿಗಳು ಸೇರಿ 8ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ಮಾಡಿದ್ದರು. ಅಲ್ಲದೆ, ಶನಿವಾರ ಬೆಳಗ್ಗೆ ಟ್ವೀಟ್​ ಮಾಡಿದ್ದ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ರಾವ್​, ಸುರಕ್ಷತಾ ಕ್ರಮಗಳನ್ನು ಪಾಲಿಸದಿದ್ದರೆ ಪೊಲೀಸರು ದಾಳಿ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದರು.
ಹಿಂದಿ ‘ಬಿಗ್​ಬಾಸ್​​’ಗೆ ಶುರುವಾಯ್ತು ದಿನಗಣನೆ; ಆದರೆ, ಕಂಡಿಷನ್ಸ್ ಅಪ್ಲೈ …

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + 1 =
Remember me
