ಬೆಂಗಳೂರು:ರಾಜಧಾನಿಯಲ್ಲಿ ಇತ್ತೀಚೆಗೆ ಸುಟ್ಟು ಕರಕಲಾದ ಮಹಿಳೆಯ ಶವ ಪತ್ತೆಯಾಗಿದ್ದು, ಈ ಪ್ರಕರಣ ನಗರದ ಪೊಲೀಸರ ತಲೆ ಕೆಡಿಸಿತ್ತು. ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ, ಬಂಧಿಸಿದ್ದಾರೆ. ಅದರಲ್ಲೂ ಇಲ್ಲಿ ಪತಿಯೇ ಕೊಲೆಗಾರ ಎಂಬುದು ಗೊತ್ತಾಗಿದೆ.
ಜುಲೈ 3ರಂದು ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಮಸಂದ್ರ ಎಂಬಲ್ಲಿ ಮಹಿಳೆಯೊಬ್ಬರ ಸುಟ್ಟು ಕರಕಲಾದ ಶವ ಪತ್ತೆಯಾಗಿತ್ತು. ಗುರುತು ಪತ್ತೆ ಹಚ್ಚಲಾಗದಷ್ಟು ದೇಹ ಸುಟ್ಟು ಹೋಗಿದ್ದರಿಂದ ಪೊಲೀಸರಿಗೆ ಈ ಪ್ರಕರಣವನ್ನು ಭೇದಿಸುವುದು ಸವಾಲಾಗಿ ಪರಿಣಮಿಸಿತ್ತು.
ಇದನ್ನೂ ಓದಿ:ರಾಜಧಾನಿಯಲ್ಲೇ ಪತ್ತೆಯಾಯ್ತು ಮಹಿಳೆಯ ಸುಟ್ಟು ಕರಕಲಾದ ದೇಹ!; ಇನ್ನೂ ಪತ್ತೆಯಾಗದ ಗುರುತು..
ಅದಾಗ್ಯೂ ತನಿಖೆ ಮುಂದುವರಿಸಿದ ಕೆಂಗೇರಿ ಪೊಲೀಸರು ವಿಜಯಪುರ ಜಿಲ್ಲೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಮಹಮ್ಮದ್ ರಫೀಕ್ ಬಂಧಿತ ಆರೋಪಿ. ಈತನ ಪತ್ನಿ ನಗೀನಾ ಕೊಲೆಯಾದಾಕೆ. ಈತ ಪತ್ನಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ. ಆರೋಪಿಯನ್ನು ಬಂಧಿಸಿಕೊಂಡು ಪೊಲೀಸರು ಬೆಂಗಳೂರಿಗೆ ಬರುತ್ತಿದ್ದಾರೆ. ಆ ಬಳಿಕದ ವಿಚಾರಣೆಯ ನಂತರ ಇನ್ನಷ್ಟು ಸಂಗತಿ ಹೊರಬೀಳಲಿವೆ.
ಹಾಡಹಗಲೇ ನಗರಸಭೆ ಮಾಜಿ ಅಧ್ಯಕ್ಷನ ಬರ್ಬರ ಕೊಲೆ; ಹೊಟ್ಟೆಗೆ ತಲವಾರ್ ಚುಚ್ಚಿಟ್ಟು ಹಾಗೇ ಹೋದ ಹಂತಕರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 9 =
Remember me
