ಬೆಳಗಾವಿ:ಬೆಳಗ್ಗೆಯಷ್ಟೇ ಮಗುವನ್ನು ಕದ್ದುಕೊಂಡು ಪರಾರಿಯಾಗಿದ್ದವಳು ಸಂಜೆಯಾಗುವಷ್ಟರಲ್ಲಿ ಸಿಕ್ಕಿಹಾಕಿಕೊಂಡಿದ್ದಾಳೆ. ಆಸ್ಪತ್ರೆಯಿಂದಲೇ ಮಗುವನ್ನು ಕಳವು ಮಾಡಿ ಪರಾರಿಯಾಗಿದ್ದ ಈಕೆಯನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಅಥಣಿ ಸರ್ಕಾರಿ ಆಸ್ಪತ್ರೆಯಿಂದ ಮಗುವನ್ನು ಕಳವು ಮಾಡಲಾಗಿತ್ತು. ಈ ಮಗುವನ್ನು ಕದ್ದ ಮಹಾರಾಷ್ಟ್ರದ ಮಹಿಶಾಳ ಗ್ರಾಮದನೀಲಾಬಾಯಿ ಕಾಂಬ್ಳೆ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.
ಆಸ್ಪತ್ರೆಗೆ ಬಂದಿದ್ದ ಈಕೆ ಮಗುವನ್ನು ತೂಕ ಮಾಡಿಸಿಕೊಂಡು ಬರುವ ನೆಪದಲ್ಲಿ ಎತ್ತಿಕೊಂಡು ಹೋಗಿದ್ದು, ಬಳಿಕ ನಾಪತ್ತೆಯಾಗಿದ್ದಳು. ಈ ಕುರಿತು ಅಥಣಿ ಪೊಲೀಸರಿಗೆ ದೂರು ನೀಡಲಾಗಿತ್ತು. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು, ಅದಾಗಲೇ ಮಹಾರಾಷ್ಟ್ರದ ಮಹಿಶಾಳಕ್ಕೆ ತೆರಳಿದ್ದ ನೀಲಾಬಾಯಿಯನ್ನು ಪತ್ತೆ ಹಚ್ಚಿ ಬಂಧಿಸಿಕೊಂಡು ಬಂದಿದ್ದಾರೆ. ಕೆಲವೇ ಗಂಟೆಗಳಲ್ಲಿ ಮಗುವನ್ನು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
ಉದ್ಯೋಗಿಯ ಆಕ್ರೋಶಕ್ಕೆ ಕಂಪನಿ ಮುಖ್ಯಸ್ಥನ ಸಂಸಾರವೇ ನಾಶ: 4 ಕೊಲೆ, 8 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿ
ಅಂಗಿ-ಬನಿಯನ್ ತೆಗೆಯಲು ತಕರಾರು: ದೇವಸ್ಥಾನಗಳಲ್ಲಿನ ಫಲಕ ತೆಗೆಸುವಂತೆ ಕೋರಿ ಅರ್ಜಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + four =
Remember me
