ಹುಬ್ಬಳ್ಳಿ:ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನುರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿರುವ ವಿಚಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಸಂಸದ ಇ ತುಕಾರಾಂ ರಾಜಿನಾಮೆ!
ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಇಂದು ಹುಬ್ಬಳ್ಳಿಗೆ ಆಗಮಿಸಿ ಮಾತನಾಡಿದ ಜೋಶಿ ಅವರು, ಸುಳ್ಳು ಆರೋಪ ಮಾಡಿದ್ದಕ್ಕೆ ರಾಹುಲ್ ಗಾಂಧಿಯವರಿಗೆ ಜಾಮೀನು ರಹಿತ ವಾರೆಂಟ್ ಆಯ್ತು, ಅದಾದ ನಂತರ ಇಂತಹ ಕೃತ್ಯಗಳು ಶುರುವಾಗಿವೆ. ಹಿರಿಯ ವ್ಯಕ್ತಿಗೆ ಈ ರೀತಿ ಆರೋಪ ಹೊರಿಸುವುದು ಅಪಚಾರ ಮಾಡಿದಂತೆ ಎಂದು ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ಸಿದ್ದರಾಮಯ್ಯ ಬುಡಕ್ಕೆ ಬರುತ್ತೆ ಅನ್ನೋ ಕಾರಣಕ್ಕೆ ವಿಷಯಾಂತರ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಸ್ವತಃ ಸರ್ಕಾರ ಹೋಗಿ ಅರೆಸ್ಟ್‌ಗೆ ಆದೇಶ ತೆಗೆದುಕೊಂಡಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕೋರ್ಟ್‌ನಲ್ಲಿ ಅರೆಸ್ಟ್ ವಾರೆಂಟ್ ಜಾರಿ ಮಾಡುವಂತೆ ಸರ್ಕಾರವೇ ಮನವಿ ಮಾಡಿಕೊಂಡಿದೆ. ಈ ಪ್ರಕರಣ ನಡೆದ ಆರು ತಿಂಗಳಾಗಿದೆ. ಆದರೆ ಆಗ ಇದೇ ಗೃಹಮಂತ್ರಿಗಳು‌ ಇದು ಸತ್ಯಕ್ಕೆ ದೂರವಾಗಿದೆ ಅಂದಿದ್ದರು. ಈಗ ಅಗತ್ಯ ಬಿದ್ದರೆ ಬಂಧಿಸುತ್ತೇವೆ ಎನ್ನುತ್ತಾರೆ. ಇದರಲ್ಲಿ ಸರ್ಕಾರದ ಪಾತ್ರವಿದೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ. ಬಿಜೆಪಿ ಮತ್ತು ಯಡಿಯೂರಪ್ಪರನ್ನ ತುಳಿಯಬಹುದು ಅಂತಾ ನೀವು ಭಾವಿಸಿದ್ರೆ ನಾನು ಪುನಃ ಪುಟಿದೇಳುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಲೋಕಸಭಾ ಚುನಾವಣೆಯಲ್ಲಿ ಒಂಬತ್ತು ಸ್ಥಾನಕ್ಕೆ ನೀವು ಸಮಾಧಾನ ಪಡುವ ಸ್ಥಿತಿ ಇದೆ. ವಾಲ್ಮೀಕಿ ಹಗರಣದಲ್ಲಿ 187 ಕೋಟಿ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಅವರದ್ದೇ ಕೈವಾಡ ಇರುವುದರಿಂದ ಭಯದಿಂದ ವಿಷಯಾಂತರ ಮಾಡಲು ಯಡಿಯೂರಪ್ಪನವರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ. ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.
ನಮ್ಮ ಕ್ಷೇತ್ರದ ಜನತೆ ನನಗೆ ಸತತವಾಗಿ ಐದನೇ ಬಾರಿಗೆ ಆಶೀರ್ವಾದ ಮಾಡಿದ್ದಾರೆ. ನಮ್ಮ ನೆಚ್ಚಿನ ಮೋದಿಯವರು ನನ್ನ ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳುವ ಮೂಲಕ ನನಗೆ ಮತ್ತೊಂದು ಅವಕಾಶ ಕೊಟ್ಟಿದ್ದಾರೆ. ಅವರಿಗೆ ಕೃತಜ್ಞತೆಯನ್ನ ಸಲ್ಲಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನುಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‍ನ ಮತ್ತಿಬ್ಬರು ಅರೆಸ್ಟ್

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:twenty − 19 =
Remember me
