ಚಿತ್ರದುರ್ಗ:18ನೇ ಸಾರ್ವತಿಕ ಚುನಾವಣೆಗೆ ದೇಶಾದ್ಯಂತ ಇಂದು (ಏಪ್ರಿಲ್ 26) ಎರಡನೇ ಹಂತದ ಮತದಾನ ನಡೆಯುತ್ತಿದ್ದು, 13 ರಾಜ್ಯಗಳ 88 ಕ್ಷೇತ್ರಗಳಿಗೆ ವೊಟಿಂಗ್​ ನಡೆಯುತ್ತಿದೆ. ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಇಂದು (ಏಪ್ರಿಲ್ 26) ಮತದಾನ ನಡೆಯುತ್ತಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.
ಇನ್ನೂ ಚುನಾವಣಾ ಕರ್ತವ್ಯದ ವೇಳೆ ಮತಗಟ್ಟೆ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಯಶೋಧಮ್ಮ (58) ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಚುನಾವಣಾ ಅಧಿಕಾರಿ ಬಿ. ಆನಂದ್, ಯಶೋಧಮ್ಮನವರು ತರಬೇತಿ ವೇಳೆ ಆರೋಗ್ಯ ಸಮಸ್ಯೆ ಬಗ್ಗೆ ಹೇಳಿಕೊಂಡಿರಲಿಲ್ಲ. ಮತದಾನ ಆರಂಭದಲ್ಲಿ ಲವಲವಿಕೆಯಿಂದಲೇ ಕರ್ತವ್ಯ ನಿರ್ವಹಿಸಿದ್ದಾರೆ. ದಿಢೀರನೆ ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮತದಾನಕ್ಕೆ ತೊಂದರೆಯಾಗದ ರೀತಿ ಬೇರೆ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಬಿ. ಆನಂದ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
