ಬೆಂಗಳೂರು :ನಗರದ ವೃಷಭಾವತಿ ಕಣಿವೆ ವ್ಯಾಪ್ತಿಯಲ್ಲಿ ಮಾಲಿನ್ಯ ತಪಾಸಣೆ ನಡೆಸಲು 3 ತುರ್ತು ಸ್ಪಂದನ ವಾಹನಗಳಿಗೆ ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಇಂದು ಚಾಲನೆ ನೀಡಿದರು. ರಾಜ್ಯ ಪರಿಸರ ಮಾಲಿನ್ಯ ಮಂಡಳಿಯು ವೃಷಭಾವತಿ ಕಣಿವೆ ವ್ಯಾಪ್ತಿಯಲ್ಲಿರುವ ಕೈಗಾರಿಕೆಗಳು ಹಾಗೂ ಉದ್ದಿಮೆಗಳಿಂದಾಗುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಈ ವಾಹನಗಳನ್ನು ನಿಯೋಜಿಸಿದೆ.
ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯೋಗೇಶ್ವರ, ವೃಷಭಾವತಿ ಕಣಿವೆ ಪ್ರದೇಶದಲ್ಲಿ ಮಾಲಿನ್ಯ ತಡೆಗಟ್ಟುವಂತೆ ಹೈಕೋರ್ಟಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಸುತ್ತೂರು ಮಠಕ್ಕೆ ಸಿದ್ದರಾಮಯ್ಯ ಭೇಟಿ
ಜೊತೆಗೆ, ಬೆಂಗಳೂರು ನಗರದಲ್ಲಿ ಇತರೆಡೆ ಅಧಿಕ ಪ್ರಮಾಣದಲ್ಲಿ ಕೈಗಾರಿಕೆ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿರುವ ಬಗ್ಗೆಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳೆದ 8 ತಿಂಗಳಿಂದ ಶಾಶ್ವತ ಅಧ್ಯಕ್ಷರಿಲ್ಲ. ಅವರನ್ನು ಸಹ ತ್ವರಿತವಾಗಿ ನೇಮಕ ಮಾಡಬೇಕಾಗಿದೆ ಎಂದರು. ವಿಧಾನಸೌಧದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ರಾಷ್ಟ್ರದಲ್ಲೇ ಪ್ರಥಮ ಪ್ರಯತ್ನ:ವೃಷಭಾವತಿ ಕಣಿವೆ ವ್ಯಾಪ್ತಿಯ ಕೈಗಾರಿಕೆಗಳಿಂದ ಮಾಲಿನ್ಯ ತಡೆಗಟ್ಟಲು ದ್ರವ ತ್ಯಾಜ್ಯ ಸಂಸ್ಕರಣಾ ಘಟಕಗಳು, ಸಾಮಾನ್ಯ ತ್ಯಾಜ್ಯ ಘಟಕಗಳು ಮತ್ತು ಕೈಗಾರಿಕೆ ತಪಾಸಣೆ ಕಾರ್ಯ ಮಾಡಲು ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಈ ಅಧಿಕಾರಿಗಳು ತುರ್ತು ಸ್ಪಂದನ ವಾಹನಗಳ ಮೂಲಕ ಕಾರ್ಯನಿರ್ವಹಿಸಲಿದ್ದು, ರಾಷ್ಟ್ರದಲ್ಲೇ ಪ್ರಥಮ ಬಾರಿಗೆ ಈ ರೀತಿ ಮಾಲಿನ್ಯ ತಡೆಗಟ್ಟುವ ಅಭಿಯಾನವನ್ನು ಆಯೋಜಿಸಲಾಗಿದೆ. ತಪಾಸಣೆಗೆ ತೆರಳುವ ಪ್ರತಿಯೊಂದು ತುರ್ತು ಸ್ಪಂದನ ವಾಹನಕ್ಕೆ ಇಬ್ಬರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಒಬ್ಬ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಮತ್ತು ಸೇನೆಯ ಒಬ್ಬ ಸಿಬ್ಬಂದಿ ಇರುತ್ತಾರೆ. ದಿನದ ೨೪ ಗಂಟೆ ಈ ವಾಹನ ಗಸ್ತು ತಿರುಗುತ್ತದೆ.
ಇದನ್ನೂ ಓದಿ:ಬೆಡ್‌ರೂಂ ಎಸಿಯೊಳಗೆ ಬೆಚ್ಚನೆ ಕುಳಿತಿತ್ತು ಆರು ಅಡಿ ಹಾವು: ಬೆಚ್ಚಿಬಿದ್ದ ಕುಟುಂಬಸ್ಥರು
ರಾಜ್ಯ ಹೈಕೋರ್ಟಲ್ಲಿ ವಿಚಾರಣೆ ಸಾಗಿರುವ ರಿಟ್ ಖಟ್ಲೆ ಸಂಖ್ಯೆ 6961/2020ರಲ್ಲಿ ನೀಡಲಾದ ಕೋರ್ಟ್​​ ನಿರ್ದೇಶನದ ಮೇರೆಗೆ ರಾಜ್ಯ ಪರಿಸರ ಮಾಲಿನ್ಯ ಮಂಡಳಿಯು ಈ ಅಭಿಯಾನವನ್ನು ಕೈಗೊಂಡಿದೆ. ಬೆಂಗಳೂರು ಉತ್ತರ ವಲಯದ ಹಿರಿಯ ಪರಿಸರ ಅಧಿಕಾರಿ ಸಿ.ಸಿದ್ದರಾಮಯ್ಯ ಅವರನ್ನು ವಿಶೇಷ ತಪಸಣಾ ಅಭಿಯಾನದ ಸಮನ್ವಯ ಅಧಿಕಾರಿಯಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಅಭಿಯಾನದ ಕೊನೆಯಲ್ಲಿ ನೀರಿ(ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ) ನೀಡಿರುವ ಸಲಹೆಗಳಿಗೆ ಸಂಬಂಧಪಟ್ಟಂತೆ ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳನ್ನು ಅನುಷ್ಠಾನಗೊಳಿಸಿ, ನಿರ್ದಿಷ್ಟ ಶಿಫಾರಸ್ಸುಗಳು ಹಾಗೂ ಕಾರ್ಯ ಯೋಜನೆಯೊಂದಿಗೆ ಹೈಕೋರ್ಟ್​​ಗೆ ಅಂತಿಮ ವರದಿ ಸಲ್ಲಿಸಲಿದ್ದಾರೆ.
ಗುಲ್ಶನ್​ ಕುಮಾರ್​ ಹತ್ಯೆ: 16 ಗುಂಡಿಟ್ಟು ಕೊಂದಿದ್ದ ಇಬ್ಬರಿಗೆ ಜೀವಾವಧಿ ಶಿಕ್ಷೆ, ಓರ್ವ ಆರೋಪಿಗೆ ಖುಲಾಸೆ

ಜೈಕೋವಿ-ಡಿ : ಮತ್ತೊಂದು ಕರೊನಾ ಲಸಿಕೆಯ ತುರ್ತು ಬಳಕೆಗೆ ಅರ್ಜಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 + 12 =
Remember me
