ಬೆಂಗಳೂರು:ಸಾರ್ವಜನಿಕರ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್​ ಎ.ತಿಮ್ಮಯ್ಯ ಅವರನ್ನು ವಜಾಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಅಧಿನಿಯಮ ಅಡಿ ಮಂಡಳಿ ಸದಸ್ಯ ಸ್ಥಾನದಿಂದಲೂ ವಜಾಗೊಳಿಸಲಾಗಿದೆ ಎಂದು ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ಅಧ್ಯಕ್ಷರಾಗಿದ್ದ ವೇಳೆ ಜಲ ಅಧಿನಿಯಮದ ಉಪಬಂಧಗಳನ್ನು ನೇರವೇರಿಸಲು ಉದ್ದೇಶಪೂರ್ವಕವಾಗಿ ನಿರಾಕರಿಸಿ, ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಮಂಡಳಿ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಮಂಜೂರಾತಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಹೀಗಿರುವಾಗ, ಹುದ್ದೆಯಲ್ಲಿ ಮುಂದುವರಿಯುವುದು ಸಾರ್ವಜನಿಕ ಹಿತಾಸಕ್ತಿಗೆ ಹಾಗೂ ಪರಿಸರ ಸಂರಕ್ಷಣೆಯ ಮೂಲ ಉದ್ದೇಶಗಳಿಗೆ ಮಾರಕವಾಗಿರುವುದರಿಂದ ವಜಾಗೊಳಿಸಲಾಗಿದೆ.
ದೇವರಾಜು ಅರಸು ಟ್ರಕ್​ ಟರ್ಮಿನಲ್​ ಎಂಡಿ ಎಸ್​.ಶಂಕರಪ್ಪ ಅಮಾನತು
ತನಿಖೆಯಲ್ಲಿ ಅಕ್ರಮ ಪತ್ತೆ:ವಾರ್ತಾ ಮತ್ತು ಪ್ರಚಾರ ಇಲಾಖೆಯನ್ನು ಕಡೆಗಣಿಸಿ ಖಾಸಗಿ ಜಾಹೀರಾತು ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿ ಹಣ ಹಾಗೂ ಅಧಿಕಾರ ದುರುಪಯೋಗ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ದಾಖಲಾಗಿದ್ದ ದೂರುಗಳನ್ನು ಅವಲೋಕಿಸಿದಾಗ ಪ್ರಕರಣದ ತನಿಖೆ ನಡೆಸಲು ಸರ್ಕಾರವು, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಅಧಿಕಾರಿಯನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿತ್ತು. ಡಾ.ಶಾಂತ್​ ಎ. ತಿಮ್ಮಯ್ಯ ವಿರುದ್ಧ ಜಾಹೀರಾತು ನೀತಿ ಉಲ್ಲಂನೆ, ಕೆಟಿಪಿಪಿ ಕಾಯ್ದೆ ಗಾಳಿಗೆ ತೂರಿರುವುದು ಸೇರಿ ಇತರ ಅಕ್ರಮ ನಡೆಸಿರುವುದು ತನಿಖೆಯಲ್ಲಿ ಸಾಬೀತಾಗಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine − eight =
Remember me
