ಬೆಂಗಳೂರು: ಹಸು ಸಾಕಣೆ ಮಾಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ಪಡೆಯಬೇಕು ಎಂಬ ನಿರ್ಣಯವನ್ನು ಕೈ ಬಿಡಬೇಕು. ರಾಜ್ಯದ ರೈತರ ಹಿತದೃಷ್ಟಿಯಿಂದ ಅನುಮತಿ ಪಡೆಯುವುದರಿಂದ ವಿನಾಯಿತಿ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಪಶುಸಂಗೋಪನೆ ಇಲಾಖೆಯ ಗಮನಕ್ಕೆ ತಾರದೆ ರಾಜ್ಯದಲ್ಲಿ ಡೈರಿ ಫಾರಂ ಮತ್ತು ಗೋಶಾಲೆ ಆರಂಭಿಸಲು ಅನುಮತಿ ಪಡೆಯಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿರುವುದು ರಾಜ್ಯದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ. ರೈತರು, ಪಶುಪಾಲಕರು ದೇಶದ ಬೆನ್ನೆಲುಬಾಗಿದ್ದು, ರಾಷ್ಟ್ರದ ಜಿಡಿಪಿಯಲ್ಲಿ ಅವರ ಪಾಲು ಗಮನಾರ್ಹವಾಗಿದೆ. ಇದನ್ನೇ ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ರೈತಾಪಿ ವರ್ಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದು ಹಸು ಸಾಕಣೆ ಮಾಡಬೇಕು ಎಂದು ಹೇಳಿರುವುದಕ್ಕೆ ರಾಜ್ಯದ ಅನೇಕ ರೈತರು ಆತಂಕಗೊಂಡಿದ್ದಾರೆ.
ನಗರ, ಪಟ್ಟಣ ಹಾಗೂ ಹಳ್ಳಿಗಳಿಂದ 200 ಮೀ. ದೂರದಲ್ಲಿ ಗೋಶಾಲೆ ಹಾಗೂ ಡೈರಿ ಫಾರಂ ಸ್ಥಾಪಿಸಬೇಕು ಎಂದು ತಿಳಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ವಿಚಾರವನ್ನು ನಮ್ಮ ಗಮನಕ್ಕೆ ತಂದಿಲ್ಲ. ಆದರೂ ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗಲು ಬಿಡುವಿದಿಲ್ಲ.
ಶುಸಂಗೋಪನೆ ಇಲಾಖೆಯಿಂದ ಹೈನುಗಾರಿಕೆಗೆ ಉತ್ತೇಜನ ನೀಡಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಷರತ್ತುಗಳನ್ನು ವಿಧಿಸಿದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಯಾರೂ ಮುಂದೆ ಬರುವುದಿಲ್ಲ. ಈ ನಿರ್ಧಾರವನ್ನು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಯಾವ ಆಧಾರದ ಮೇಲೆ ಕೈಗೊಂಡಿದೆ ಎಂದು ತಿಳಿದಿಲ್ಲ. ನಾನು ಅರಣ್ಯ, ಪರಸರ ಸಚಿವರು ಹಾಗೂ ಕಾನೂನು ಸಚಿವರ ಜತೆ ಸಮಾಲೋಚಿಸಿ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ ಎಂದು ಪ್ರಭು ಚವ್ಹಾಣ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
