ಬೆಂಗಳೂರು:ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನದ ಅದಲು-ಬದಲು ಆಟ ಮುಂದುವರಿದಿದ್ದು, ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸಚಿವರಿಬ್ಬರ ಖಾತೆ ಬದಲಾವಣೆ ಮಾಡಿದ್ದಾರೆ.
ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿದ್ದ ಸಚಿವ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಸಿಎಂ ಬಿಎಸ್​ವೈ ಮಾಧುಸ್ವಾಮಿ ಹಾಗೂ ಸಿ.ಪಿ ಯೋಗೇಶ್ವರ್ ಖಾತೆ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸಣ್ಣ ನೀರಾವರಿ ಇಲಾಖೆ ಪಡೆಯುವಲ್ಲಿ ಮಾಧುಸ್ವಾಮಿ ಯಶಸ್ವಿಯಾಗಿದ್ದಾರೆ.
ಮಧ್ಯಾಹ್ನ ವೈದ್ಯಕೀಯ ಖಾತೆ ಹಿಂಪಡೆದಿದ್ದ ಸಿಎಂ ಬಿಎಸ್​ವೈ, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಿದ್ದರು. ಈಗ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಯೋಗೇಶ್ವರ್‌ಗೆ ನೀಡಿ, ಮಾಧುಸ್ವಾಮಿಗೆ ಸಣ್ಣ ನೀರಾವರಿ ನೀಡಿದ್ದಾರೆ. ಸಣ್ಣ ನೀರಾವರಿ ಖಾತೆಗೆ ಪಟ್ಟುಹಿಡಿದು ಮುನಿಸುಕೊಂಡಿದ್ದ ಮಾಧುಸ್ವಾಮಿ ಮುನಿಸು ಶಮನಗೊಂಡಿದೆ.
ತನ್ನ ಕೈಯಿಂದ ಜೆ.ಸಿ. ಮಾಧುಸ್ವಾಮಿಗೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆಯುವಲ್ಲಿ ಡಾ.ಕೆ.ಸುದಾಕರ್ ಇಂದು ಬೆಳಗ್ಗೆ ಯಶಸ್ವಿಯಾಗಿದ್ದರು. ಆ ಮೂಲಕ ಸುಧಾಕರ್​ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜತೆಗೆ ವೈದ್ಯಕೀಯ ಶಿಕ್ಷಣ ಖಾತೆಯೂ ಸಿಕ್ಕಂತಾಗಿದೆ. ಇನ್ನು ಖಾತೆ ಅದಲು-ಬದಲು ಆಗುವ ಬಗ್ಗೆ ಸೋಮವಾರ ಬೆಳಗ್ಗೆಯೇ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಗರಂ ಆಗಿದ್ದ ಸಚಿವ ಮಾಧುಸ್ವಾಮಿ, ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಮಾಧುಸ್ವಾಮಿಯ ಆಕ್ರೋಶ ಶಮನಕ್ಕೆ ಯತ್ನಿಸಿದ್ದ ಸಿಎಂ, ಪ್ರವಾಸೋದ್ಯಮದ ಜತೆಗೆ ಪರಿಸರ ವಿಜ್ಞಾನ ಖಾತೆಯನ್ನೂ ಕೊಟ್ಟಿದ್ದರು.
ಮತ್ತೆ ಸಚಿವರ ಖಾತೆ ಅದಲು-ಬದಲು! ಯಾರಿಗೆ, ಯಾವುದು ಸಿಕ್ತು? ಇಲ್ಲಿದೆ ಡಿಟೇಲ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − one =
Remember me
