ಬೆಂಗಳೂರು: ರಾಜ್ಯದಲ್ಲಿಮೇ 7 ರಂದು ನಡೆಯುತ್ತಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಅಗತ್ಯ ಸೇವೆಗಳ ಇಲಾಖೆ ಸಿಬ್ಬಂದಿಗೆ ಬುಧವಾರದಿಂದ ಮೂರು ದಿನ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
14 ಲೋಕಸಭಾ ಕ್ಷೇತಗಳಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದ್ದು, ಬುಧವಾರದಿಂಧ ಮೇ 3ರವರೆಗೆ ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಅಂಚೆ ಮತದಾನ ಮಾಡಬಹುದಾಗಿದೆ.
ಅಗತ್ಯ ಸೇವೆಗಳ ಇಲಾಖೆಗಳಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಳಾಖೆಗಳ ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗ ಅಂಚೆ ಮತದಾನ ಕೇಂದ್ರಗಳನ್ನು ತೆರೆದಿದೆ. ಅರ್ಹ ಮತದಾರರು ಅಂಚೆ ಮತಪತ್ರಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 15 =
Remember me
