ಬೆಂಗಳೂರು :ಸಿಕ್ಕ ಸಿಕ್ಕ ಮರಗಳಿಗೆ ಭಿತ್ತಿ ಪತ್ರಗಳನ್ನು ಮೊಳೆ ಅಥವಾ ಪಿನ್ ಹೊಡೆದು ಹಾನಿ ಮಾಡಿದರೆ ಇನ್ನೂ ಮುಂದೆ ಕ್ರಿಮಿನಲ್ ಕೇಸ್ ದಾಖಲಾಗುತ್ತೆ ಎಚ್ಚರ. ಇತ್ತೀಚೆಗೆ ನಗರದಲ್ಲಿ ಮರಗಳಿಗೆ ಭಿತ್ತಿ ಪತ್ರ ಅಂಟಿಸುವರ ವಿರುದ್ಧ ಅಭಿಯಾನ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಪೊಲೀಸ್ ಠಾಣೆಗೆ ದೂರು ಸಹ ನೀಡಲಾಗುತ್ತಿದೆ.
ಇದನ್ನೂ ಓದಿ:ಪಿಯು ಪಾಸಾದ ಬಾಲಕಿಯರಿಗೆ ಸ್ಕೂಟರ್ ಗಿಫ್ಟ್​ ಕೊಡಲು ಮುಂದಾದ ರಾಜ್ಯ ಸರ್ಕಾರ! ಶಾಲೆಗೆ ಹೋದರೆ ಸಿಗುತ್ತೆ ದುಡ್ಡು!
ಕಬ್ಬನ್ ಪೇಟೆ ನಿವಾಸಿ ಪ್ರೇಮ್ ಕುಮಾರ್ ಎಂಬುವರು, ಮರಕ್ಕೆ ಭಿತ್ತಿ ಪತ್ರ ಅಂಟಿಸಿದವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಮೇರೆಗೆ ಭಿತ್ತಿ ಪತ್ರದಲ್ಲಿದ್ದ ಮೊಬೈಲ್ ನಂಬರ್‌ಗಳ ವಿರುದ್ಧ ಎಫ್​ಐಆರ್​ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಕಾಮಗಾರಿ ನೆಪದಲ್ಲಿ ರಾಜಕೀಯ ದ್ವೇಷ ತೀರಿಸಿಕೊಂಡ್ರು! ಬಿಜೆಪಿ ಮುಖಂಡನ ಮನೆ ಕಾಂಪೌಂಡ್ ಧ್ವಂಸ
ಕಬ್ಬನ್ ಪೇಟೆ ಮುಖ್ಯ ರಸ್ತೆಯ ಬಹುತೇಕ ಮರಗಳ ಮೇಲೆ ಬ್ಯಾಂಕಿಂಗ್ ಸೇವೆಗೆ ಟೆಲಿಕಾಲರ್ ಬೇಕಾಗಿದ್ದಾರೆ ಎಂದು ಭಿತ್ತಿ ಪತ್ರವನ್ನು ಮೊಳೆ ಮತ್ತು ಪಿನ್ ಹೊಡೆದಿದ್ದಾರೆ. ಇದರಿಂದ ಮರಗಳಿಗೆ ಹಾನಿ ಮತ್ತು ನಗರ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಕೋರ್ಟ್‌ನಲ್ಲಿ ಸಾಬೀತಾದರೇ 6 ತಿಂಗಳು ಜೈಲು ಶಿಕ್ಷೆ ಅಥವಾ 1 ಸಾವಿರ ರೂ. ದಂಡ ವಿಧಿಸುವ ಸಾಧ್ಯತೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.
‘ಸಿದ್ದರಾಮಯ್ಯನವರು ನಮ್ಮೂರಿಗೆ ಏನೂ ಮಾಡಿಲ್ಲ’ ಸಿದ್ದರಾಮಯ್ಯ ಎದುರೇ ಅಸಮಾಧಾನ ತೋಡಿಕೊಂಡ ಗ್ರಾ.ಪಂ ಸದಸ್ಯ! ವೇದಿಕೆಯಿಂದ ಕೆಳಕ್ಕೆ ನೂಕಿದ ಸಿದ್ದರಾಮಯ್ಯ!

ಮಾರಣಾಂತಿಕ ಎಬೋಲಾ ಪತ್ತೆಹಚ್ಚಿದ ವೈದ್ಯನಿಂದ ಇಡೀ ಮನುಕುಲವೇ ಬೆಚ್ಚಿಬೀಳುವಂತಹ ಎಚ್ಚರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 6 =
Remember me
