ಬೆಂಗಳೂರು:ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಆಳಂದ ಹಾಗೂ ಚಿತ್ತಾಪುರದಲ್ಲಿ ಬಿಜೆಪಿ ಇಂದು ಆಯೋಜಿಸಿದ್ದ ಜನಸಂಕಲ್ಪ ಯಾತ್ರೆ ಹಾಗೂ ಸಮಾವೇಶ ಮುಂದೂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದ್ದ ಈ ಯಾತ್ರೆ ಮುಂದೂಡಿಕೆಯಾಗಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಯಾತ್ರೆಯ ಸಂಯೋಜಕ ಎನ್.ರವಿಕುಮಾರ್ ತಿಳಿಸಿದ್ದಾರೆ.
ಬಿಎಸ್​​ವೈ ಹಾಗೂ ಬೊಮ್ಮಾಯಿ‌ ಜಂಟಿಯಾಗಿ ಜನಸಂಕಲ್ಪ ಯಾತ್ರೆಯನ್ನು ಕಲ್ಯಾಣ ಕರ್ನಾಟಕದಿಂದ ಆರಂಭಿಸಿದ್ದು, ಈಗಾಗಲೇ ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಯಾತ್ರೆ ಪೂರ್ಣಗೊಳಿಸಿದ್ದು, ಈ ಪ್ರಾಂತದಲ್ಲಿ ಭಾನುವಾರದ ಕಾರ್ಯಕ್ರಮ ಕೊನೆಯದಾಗಿತ್ತು. ದೀಪಾವಳಿ ಹಬ್ಬದ ನಂತರ ಮಧ್ಯ ಕರ್ನಾಟಕದಲ್ಲಿ ಜನಸಂಕಲ್ಪ ಯಾತ್ರೆ ಕೈಗೊಳ್ಳಲು ಉದ್ದೇಶಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 15 =
Remember me
