ಉಡುಪಿ:ಕರೊನಾ ರೋಗಿಗೆ ಚಿಕಿತ್ಸೆ ನೀಡಲು ವೈದ್ಯರು, ನರ್ಸ್‌ಗಳಿಗೆ ಅತ್ಯಗತ್ಯವಾಗಿರುವ ವೈಯಕ್ತಿಕ ರಕ್ಷಣಾ ಸಲಕರಣೆ (ಪರ್ಸನಲ್ ಪ್ರೊಟೆಕ್ಟಿವ್ ಇಕ್ವಿಪ್‌ಮೆಂಟ್-ಪಿಪಿಇ)ಕಿಟ್‌ಗಳ ಕೊರತೆ ಉಂಟಾಗಿದ್ದು, ಉಡುಪಿಯಲ್ಲೇ ಇವುಗಳ ತಯಾರಿಗೆ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಶಂಕಿತ ಕರೊನಾ ವೈರಸ್ ರೋಗ ಲಕ್ಷಣಕ್ಕೆ ಸಂಬಂಧಿಸಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ. ಪರಿಣಾಮ ಜಿಲ್ಲೆಯಲ್ಲಿ ಕೆಲವೇ ಕೆಲವು ಪರ್ಸನಲ್ ಪ್ರೊಟೆಕ್ಟಿವ್ ಇಕ್ವಿಪ್‌ಮೆಂಟ್ ಕಿಟ್ ಇರುವುದರಿಂದ ಚಿಕಿತ್ಸೆ ಒದಗಿಸಲು ಸಮಸ್ಯೆಯಾಗುತ್ತದೆ. ರಾಜ್ಯ ಸರ್ಕಾರದಿಂದಲೂ ಕಿಟ್‌ಗಳ ಪೂರೈಕೆ ವಿಳಂಬವಾಗುತ್ತಿದೆ. ಇದು ಜಿಲ್ಲಾಡಳಿತ ಹಾಗೂ ಜಿಲ್ಲಾ ಇಲಾಖೆಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಲು ನಿರ್ಧರಿಸಿ, ಕಿಟ್‌ಗಳನ್ನು ಉತ್ಪಾದಿಸುವ ಘಟಕವನ್ನು ಜಿಲ್ಲೆಯಲ್ಲೇ ಸ್ಥಾಪಿಸಿ ಕಾರ್ಯಾರಂಭ ಮಾಡಲಾಗಿದೆ. ಒಂದು ಸಾವಿರ ಪಿಪಿಇ ಕಿಟ್‌ಗಳನ್ನು ಉತ್ಪಾದಿಸಿ ಜಿಲ್ಲೆಯ ಕರೊನಾ ಚಿಕಿತ್ಸೆ ನೀಡುವ ಆಸ್ಪತ್ರೆಗಳಿಗೆ ಪೂರೈಸಲು ಯೋಚಿಸಲಾಗಿದೆ.
ಏನೇನು ತಯಾರಿ?:ಘಟಕದಲ್ಲಿ ಕನ್ನಡಕ, ಮುಖಗುರಾಣಿ, ಮಾಸ್ಕ್, ಕೈಗವಸು, ಗೌನ್ಸ್, ಹೆಡ್‌ಕವರ್ ಮತ್ತು ಶೂ ಕವರ್‌ಗಳನ್ನು ತಯಾರಿಸಲಾಗುತ್ತದೆ. ಘಟಕದಲ್ಲಿ ತಯಾರಿಸುವ ಒಂದು ಪಿಪಿಇ ಕಿಟ್‌ಗೆ 2000ದಿಂದ 3000 ರೂ.ವರೆಗೆ ವೆಚ್ಚವಾಗಲಿದ್ದು, ಇದಕ್ಕೆ ಜಿಲ್ಲಾಡಳಿತ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿರುವ ಹಣವನ್ನು ಬಳಕೆ ಮಾಡಿಕೊಳ್ಳಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಒಬ್ಬ ರೋಗಿಗೆ 3-10 ಕಿಟ್‌ಗಳು:ವಿಶ್ವ ಆರೋಗ್ಯ ಸಂಸ್ಥೆ ಸೂಚನೆಯಂತೆ ಪಿಪಿಇ ಕಿಟ್‌ಗಳನ್ನು ಕರೊನಾ ವೈರಸ್ ಶಂಕಿತ ಹಾಗೂ ಸೋಂಕಿತ ರೋಗಿಗಳ ಚಿಕಿತ್ಸೆ ವಿವಿಧ ಪ್ರಕ್ರಿಯೆ ಸಂದರ್ಭದಲ್ಲಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಸುರಕ್ಷತಾ ಕ್ರಮವಾಗಿ ಬಳಸಿಕೊಳ್ಳಬೇಕು. ಆಸ್ಪತ್ರೆಗೆ ದಾಖಲಾಗುವ ಶಂಕಿತ ಕರೊನಾ ರೋಗಿಯ ಗಂಟಲು ದ್ರವ ಸಂಗ್ರಹ, ವಿವಿಧ ರೀತಿಯ ಚಿಕಿತ್ಸೆಯ ಸಂದರ್ಭದಲ್ಲಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಅಂದಾಜು 3ರಿಂದ 10 ಕಿಟ್‌ಗಳು ಬೇಕಾಗುತ್ತವೆ . ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂದರ್ಭ ಇದಕ್ಕಿಂತ ಹೆಚ್ಚು ಅಂದರೆ 7ರಿಂದ 10 ಕಿಟ್‌ಗಳು ಅವಶ್ಯಕವಾಗಿರುತ್ತವೆ ಎಂದು ತಿಳಿಸಿದ್ದಾರೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 124 ಮಂದಿಯನ್ನು ಈ ಸೋಂಕಿನ ಶಂಕೆಯ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸಾವಿರಾರು ಕಿಟ್ ಬಳಕೆ ಮಾಡಲಾಗಿದೆ.ಜಿಲ್ಲೆಯಲ್ಲಿ ಪಿಪಿಇ ಕಿಟ್‌ಗಳ ತಯಾರಿಕಾ ಘಟಕ ಕಾರ್ಯಾರಂಭ ಮಾಡಿದೆ. ಇನ್ನೆರಡು ದಿನಗಳಲ್ಲಿ ಕಿಟ್‌ಗಳು ಕೈಸೇರಲಿವೆ. ಈ ನಡುವೆ ರಾಜ್ಯ ಸರ್ಕಾರ ಸಹ ಕಿಟ್‌ಗಳನ್ನು ಸರಬರಾಜು ಮಾಡುವುದಾಗಿ ತಿಳಿಸಿದೆ. ಜಿಲ್ಲೆಯಲ್ಲಿ ಮಂದಿನ ದಿನಗಳಲ್ಲಿ ಪಿಪಿಇ ಕಿಟ್ ಕೊರತೆ ಇರುವುದಿಲ್ಲ.
-ಜಿ.ಜಗದೀಶ್, ಜಿಲ್ಲಾಧಿಕಾರಿ, ಉಡುಪಿ
ಅವಿನ್ ಶೆಟ್ಟಿ
ಕರೊನಾ ಸೋಂಕು ಇದ್ದರೂ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡ, 11 ಜನರಿಗೆ ಸೋಂಕು ಹರಡಿ ಜೈಲು ಸೇರಿದ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
