ಚಿತ್ರದುರ್ಗ:ಮೂಲತಃ ಮಹಾರಾಷ್ಟ್ರದವರಾದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ಬೀದರ್ ಜಿಲ್ಲೆಗೆ ಬಂದು ಪರಿಶಿಷ್ಟ ಜಾತಿಯ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿದ್ದಾರಂತೆ!
ಈ ರೀತಿ ಆರೋಪ ಮಾಡಿದವರು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎಚ್. ಆಂಜನೇಯ. ‘‘ನಕಲಿ ಜಾತಿ ಪ್ರಮಾಣ ಪತ್ರ ನೀಡಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಚಿವ ಪ್ರಭು ಚೌವ್ಹಾಣ್ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ಮಂತ್ರಿ ಸ್ಥಾನದಿಂದ ಕೈಬಿಡಬೇಕು’’ ಎಂಬುದು ಅವರ ಒತ್ತಾಯ.
ಇದನ್ನೂ ಓದಿ:ತಹಸೀಲ್ದಾರ್‌ಗೆ ಕರೊನಾ ಬಂದಿದ್ದೇ ನೆಪ ಮಾಡ್ಕೊಂಡು 75 ಲಕ್ಷ ರೂ. ಗುಳುಂ!
‘‘ಚೌವ್ಹಾಣ್ ಅವರು ಮೀಸಲಾತಿ ಮೇಲೆ ದೌರ್ಜನ್ಯ ನಡೆಸಿದ್ದರೂ ಮೂಲ ಲಂಬಾಣಿಗರು ವಿರೋಧಿಸದೆ ಏಕೆ ಸುಮ್ಮನಿದ್ದಾರೆ? ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಂಕರ್ ಜೋಗಿ ಎನ್ನುವವರು ಚೌವ್ಹಾಣ್ ಪರಿಶಿಷ್ಟ ಜಾತಿಗೆ ಸೇರಿದವರಲ್ಲ ಎಂಬುದಾಗಿ ಆಕ್ಷೇಪಣೆ ಸಲ್ಲಿಸಿದ್ದರೂ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸದ ಕಾರಣ ಇಂದು ಪ್ರಭು ಚೌವ್ಹಾಣ್ ಮಂತ್ರಿಯಾಗಿ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಬೀದರ್ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದರೂ ಹಿಂದಿನ ಜಿಲ್ಲಾಧಿಕಾರಿ ಹಾಗೂ ಈಗಿನ ಜಿಲ್ಲಾಧಿಕಾರಿ ಯಾವ ಕ್ರಮವನ್ನೂ ಕೈಗೊಳ್ಳದೆ ಮೂಕ ಪ್ರೇಕ್ಷಕರಾಗಿದ್ದಾರೆ’’ ಎಂಬ ಗಂಭೀರ ಆರೋಪವನ್ನೂ ಆಂಜನೇಯ ಮಾಡಿದರು.
ಏಳು ರಾಜ್ಯದ ಮುಖ್ಯಮಂತ್ರಿಗಳ ಜತೆ ಕೋವಿಡ್​ ಪರಿಸ್ಥಿತಿ ಪರಿಶೀಲಿಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + six =
Remember me
