ಚಿಕ್ಕಬಳ್ಳಾಪುರ:ಮುಂದಿನ ಲೋಕಸಭಾ ಚುನಾವಣೆಯಲ್ಲಿನ ಸ್ಪರ್ಧಿಗಳ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಸುಳಿವು ನೀಡಿದ್ದಾರೆ.
ಚಿಕ್ಕಬಳ್ಳಾಪುರದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್​ ಈಶ್ವರ್​, “ಇಬ್ಬರೂ ಗೆಲುವು ಸಾಧಿಸುತ್ತಾರೆ, ಇವರ ಗೆಲುವಿಗೆ ನಾನು ಹಗಲಿರುಳು ದುಡಿಯುತ್ತೇನೆ. ಈ ಬಾರಿ ಕೋಲಾರ, ಚಿಕ್ಕಬಳ್ಳಾಪುರ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತೇವೆ. ರಾಜ್ಯದಲ್ಲಿ 20 ಎಂಪಿ ಸೀಟ್​ಗಳನ್ನು ಗೆಲ್ಲುತ್ತೇವೆ‌” ಎಂದು ಪ್ರದೀಪ್ ಈಶ್ವರ್ ಹೇಳಿಕೆ‌ ನೀಡಿದ್ದಾರೆ.
ವೀರಪ್ಪ ಮೊಯ್ಲಿ, ರಕ್ಷಾ ರಾಮಯ್ಯ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದ್ದು ಇಬ್ಬರೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದಿದ್ದಾರೆ.
ಇನ್ನು ಚಿಕ್ಕಬಳ್ಳಾಪುರದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ವಿಚಾರವಾಗಿ ಮಾತನಾಡಿದ ಪ್ರದೀಪ್ ಈಶ್ವರ್, “ಡಿಪೋ ಮ್ಯಾನೇಜರ್ ಬಳಿ ಮಾತನಾಡುತ್ತೇನೆ. ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ನೀಡುತ್ತೇವೆ. ಶಾಸಕರನ್ನು ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿರುವುದು ಖುಷಿಯ ಸಂಗತಿ” ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + twelve =
Remember me
