ಚಿಕ್ಕಬಳ್ಳಾಪುರ:ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶಗಳು ಹೊರಬಿದ್ದ ಬೆನ್ನಲ್ಲೇ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಅವರ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಸಿಕ್ಕಿಂ ಮುಖ್ಯಮಂತ್ರಿಯಾಗಿ ಜೂನ್​ 10ಕ್ಕೆ ತಮಾಂಗ್ ಪ್ರಮಾಣ ವಚನ!
ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂಬುವರನ್ನು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ತಿಳಿದುಬಂದಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 04ರ ರಾತ್ರಿ ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ ಬಿಬಿ ರಸ್ತೆಗೆ ಅಂಟಿಕೊಂಡಿರುವಂತೆ ಕಂದವಾರ ಗ್ರಾಮದ ಸಮೀಪದ ಗಣೇಶ್ ಪದ್ಮ ಲೇಔಟ್‌ನಲ್ಲಿರುವ ಶಾಸಕ ಪ್ರದೀಪ್ ಈಶ್ವರ್ ಮನೆಗೆ ಕಲ್ಲೆಸೆದು ಪರಾರಿಯಾಗಿದ್ದರು. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆ ಸಂಬಂಧ ಪ್ರದೀಪ್ ಅವರ ಅಕ್ಕಪಕ್ಕದ ಮನೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ಅದರಲ್ಲಿ ಕಲ್ಲು ತೂರಾಟದಲ್ಲಿ ನಾಲ್ವರು ಯುವಕರು ಪಾಲ್ಗೊಂಡಿದ್ದು ಕಂಡುಬಂದಿತ್ತು. ಅವರೆಲ್ಲರೂ ಕಲ್ಲು ತೂರುತ್ತಾ ಘೋಷಣೆಗಳನ್ನು ಕೂಗುತ್ತಾ ಇದ್ದಿದ್ದು ಮೇಲ್ನೋಟಕ್ಕೆ ಕಂಡಂಬಂದಿತ್ತು. ಪ್ರದೀಪ್ ಈಶ್ವರ್ ಅವರ ಮನೆಯ ಸಿಸಿಟಿವಿಗಳ ಸೆನ್ಸರ್ ಗಳು ಆನ್ ಆಗುತ್ತಿದ್ದಂತೆಯೇ ಆ ಯುವಕರು ಅಲ್ಲಿಂದ ಕಾಲ್ಕಿತ್ತಿದ್ದರು.
ಎನ್‌ಡಿಎ ಅಭಿವೃದ್ಧಿಯ ಧ್ಯೇಯ ಹೊಂದಿರುವ ಸರ್ಕಾರವನ್ನು ರಚಿಸಲಿದೆ: ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
