ಮಂಡ್ಯ: ರಾಜ್ಯ ಸರ್ಕಾರ ಜಾತಿವಾರು ಪ್ರಾಧಿಕಾರ ಮಾಡಲು ಹೊರಟರೆ ಬೊಕ್ಕಸಕ್ಕೆ ಆರ್ಥಿಕ ಹೊರೆ ಬೀಳಲಿದೆ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ನಾಗಣ್ಣ ಬಾಣಸವಾಡಿ ಹೇಳಿದರು.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರಾಠ ಪ್ರಾಧಿಕಾರ ರಚಿಸಿ 50 ಕೋಟಿ ರೂ ನೀಡಿದ್ದಾರೆ. ಇದೀಗ ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಮ್ಮತಿ ಸೂಚಿಸಿದ್ದಾರೆ. ಇದೇ ರೀತಿ ಜಾತಿವಾರು ಪ್ರಾಧಿಕಾರ ರಚನೆ ಮಾಡಿದಲ್ಲಿ ವಿಧಾನಸೌಧವನ್ನೇ ಜಾತಿವಾರು ಪ್ರಾಧಿಕಾರವನ್ನಾಗಿ ಮಾಡಬೇಕಾಗುತ್ತದೆ. ಇದು ಒಕ್ಕೂಟದ ವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಎಲ್ಲ ಜಾತಿ, ವರ್ಗದಲ್ಲಿಯೂ ಬಡವರು, ಶ್ರೀಮಂತರಿದ್ದಾರೆ. ಉನ್ನತ ಜಾತಿಗಳಲ್ಲಿರುವ ಬಡವರಿಗೆ ಸರ್ಕಾರದ ಯಾವುದೇ ಸೌಲಭ್ಯಗಳೂ ದೊರೆಯುತ್ತಿಲ್ಲ. ಒಕ್ಕೂಟ ವ್ಯವಸ್ಥೆ ಗಟ್ಟಿಯಾಗಬೇಕಾದರೆ ಆರ್ಥಿಕ ಮೀಸಲಾತಿ ನೀಡಬೇಕು. ಆ ಮೂಲಕ ಎಲ್ಲ ವರ್ಗದರಿಗೂ ಸರ್ಕಾರದ ಸೌಲಭ್ಯ ದೊರೆಯುವಂತಾಗಬೇಕು. ಒಕ್ಕಲುತನವನ್ನೇ ಕಾಯಕ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಒಕ್ಕಲಿಗ ಸಮುದಾಯದಲ್ಲೂ ಬಡವರಿದ್ದಾರೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಸಂವಿಧಾನದ ಆಶಯದಂತೆ ಸಮಪಾಲು, ಸಮಬಾಳ್ವೆ ಸಿಗುವ ಹಾಗೆ ನೋಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.ರಾಜ್ಯದಲ್ಲಿ ಒಕ್ಕಲಿಗ ಸಮುದಾಯವನ್ನು ಹಲವು ಉಪ ಜಾತಿಗಳನ್ನಾಗಿ ಒಡೆದು ರಾಜಕೀಯ ಲಾಭ ಪಡೆಯುತ್ತಿರುವ ಎಲ್ಲ ರಾಜಕೀಯ ಪಕ್ಷಗಳು, ಪ್ರಮುಖವಾಗಿ ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿರುವ ಕುಡು ಒಕ್ಕಲಿಗರಿಗೆ ಈವರೆಗೆ ಜಾತಿ ಪ್ರಮಾಣ ಪತ್ರವಾಗಲೀ, ಶಿಕ್ಷಣವಾಗಲೀ, ಉದ್ಯೋಗವಾಗಲೀ, ಸಿಗದಂತೆ ನೋಡಿಕೊಂಡು ಅವರನ್ನು ಜೀತ ಪದ್ಧತಿಯಲ್ಲಿ ಬದುಕುವಂತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.16 ಮೀಸಲಾತಿ ಕೊಡಬೇಕು. ಈ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿದಲ್ಲಿ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಒಕ್ಕೂಟದ ಗೌರವಾಧ್ಯಕ್ಷ ಸಿ.ಆರ್.ರಮೇಶ್, ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಕಾರ್ಯಾಧ್ಯಕ್ಷ ಎಲ್.ಕೃಷ್ಣ, ಸಂಘಟನಾ ಕಾರ್ಯದರ್ಶಿ ಚಂದ್ರು, ನಾಗೇಶ್ ಪಾಂಡವಪುರ, ಮಹಿಳಾ ಸಂಚಾಲಕಿ ಸೌಭಾಗ್ಯಮ್ಮ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + nineteen =
Remember me
