ಹುಕ್ಕೇರಿ(ಬೆಳಗಾವಿ):2019ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಪ್ರಫುಲ್ ಕೆಂಪಣ್ಣ ದೇಸಾಯಿ 532ನೇ ರ‍್ಯಾಂಕ್​ ಗಳಿಸಿದ್ದಾರೆ.
ಕೃಷಿ ಅಥವಾ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಮಾಡುವಲ್ಲಿ ಆಸಕ್ತಿ ಹೊಂದಿರುವ ಪ್ರಫುಲ್ ಕೆಂಪಣ್ಣ ದೇಸಾಯಿ ಅವರಿಗೆ ಗ್ರಾಮೀಣ ಭಾಗದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಯುಪಿಎಸ್‍ಸಿ ಪರೀಕ್ಷೆ ಬರೆಯಬೇಕು ಎಂಬುದು ಅವರ ಮಹದಾಸೆ. ಅದಕ್ಕಾಗಿ ಹುಕ್ಕೇರಿ ತಾಲೂಕಿನಲ್ಲಿ ಯಾರಾದರೂ ಯುಪಿಎಸ್‍ಸಿ ಪರೀಕ್ಷೆ ಬರೆಯಲು ಆಸಕ್ತಿ ವಹಿಸಿ ಸಂಪರ್ಕಿಸಿದರೆ, ಅವರಿಗೆ ಉಚಿತವಾಗಿ ಮಾರ್ಗದರ್ಶನ ನೀಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿರಿಬಸವನಾಡಿನ ಯುವತಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಅಕ್ಕನ ಹಾದಿಯಲ್ಲೇ ತಂಗಿಯ ಪಯಣ
ಬಾಲ್ಯದಿಂದಲೂ ಐಎಎಸ್ ಅಧಿಕಾರಿ ಆಗುವ ಕನಸು ಕಂಡಿದ್ದ ಪ್ರಫುಲ್ ಬಿಇ ಓದು ಮುಗಿದ ಬಳಿಕ ಯುಪಿಎಸ್‍ಸಿ ಪರೀಕ್ಷೆ ಎದುರಿಸಲು ಸಿದ್ಧತೆ ಆರಂಭಿಸಿ, ಎರಡು ಬಾರಿ ಯಶಸ್ಸಿನ ಸಮೀಪ ಬಂದು ವಿಫಲರಾದರು. ಛಲ ಬಿಡದ ತ್ರಿವಿಕ್ರಮನಂತೆ ಮೂರನೇ ಯತ್ನದಲ್ಲಿ ಯಶ ಕಂಡಿದ್ದಾರೆ. ತಂದೆ ಕೆಂಪಣ್ಣ ದೇಸಾಯಿ ಬಿಎ ಪದವೀಧರರಾಗಿದ್ದು, ಕೃಷಿ ಮತ್ತು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ತಾಯಿ ಮಂಗಲ ಗೃಹಿಣಿ. ಹಿರಿಯ ಸಹೋದರಿ ಬೆಳಗಾವಿ ಸಿವಿಲ್ ಕೋರ್ಟ್‍ನಲ್ಲಿ ಎಸ್‍ಡಿಸಿ ಆಗಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಬೆಳೆದು ಕನ್ನಡ ಮಾಧ್ಯಮದಲ್ಲೇ ಓದಿದ್ದ ಪ್ರಫುಲ್ ಕೆಂಪಣ್ಣ ದೇಸಾಯಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಪಾಸ್​ ಅಗಿರುವುದು ಗ್ರಾಮೀಣ ಮಕ್ಕಳಾದಿಯಾಗಿ ಎಲ್ಲರಿಗೂ ಸ್ಫೂರ್ತಿ.
video/ ಮರಳು ಕಲಾವಿದನ ಕೈಯಲ್ಲಿ ಅರಳಿತು ಶ್ರೀರಾಮ ಮಂದಿರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 5 =
Remember me
