
ಬೆಂಗಳೂರು:ಪ್ರಜ್ವಲ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡರ ಅವರನ್ನು ಮುಂದಿಟ್ಟುಕೊಂಡು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕುತಂತ್ರ ನಡೆಸಿರುವುದರಿಂದ ಈ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದ ನಿಯೋಗಪೊಲೀಸ್ ಮಹಾನಿರ್ದೇಶಕರನ್ನು ಒತ್ತಾಯಿಸಿದೆ.ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣನ ದೌರ್ಜನ್ಯ, ಲೈಂಗಿಕ ಕಿರುಕುಳ, ಅಪಹರಣ, ಬೆದರಿಕೆ ಪ್ರಕರಣಗಳ ಬಗ್ಗೆ ಮತ್ತು ಲೈಂಗಿಕ ಚಿತ್ರಗಳ ಪೆನ್ ಡ್ರೈವ್ ಬಗ್ಗೆ ಪ್ರಕರಣ ದಾಖಲಾಗಿದ್ದು, ಇದನ್ನು ರಾಜಕೀಯವಾಗಿ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಪಕ್ಷದ ನಾಯಕರ ವಿರುದ್ಧ ಒಳಸಂಚು ನಡೆಸಲಾಗುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.ಅಶ್ಲೀಲ ವಿಡಿಯೋ ಸಂಗ್ರಹಣೆಯ ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಉದ್ದೇಶ ಪೂರ್ವಕವಾಗಿ ತಮ್ಮ ಮೇಲಿರುವ ಆರೋಪವನ್ನು ಕಾಂಗ್ರೆಸ್ ಸರ್ಕಾರ ಹಾಗೂ ಪಕ್ಷದ ನಾಯಕರ ಮೇಲೆ ಹೊರಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.ಬಂಧಿತನಾಗಿರುವ ದೇವರಾಜೇಗೌಡ ಎಂಬವರು, ಈಗಾಗಲೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿತ್ ಷಾ ಅವರನ್ನು ದೂರವಾಣಿ ಮೂಲಕ ಹಾಗೂ ಖುದ್ದಾಗಿ ಭೇಟಿ ಮಾಡಿ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಇರುವ ವಿಷಯವನ್ನು ಚರ್ಚಿಸಿ ನನ್ನ ಬಳಿ ಇದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ದೂರಲಾಗಿದೆ.ಪೆನ್ ಡ್ರೈವ್ ವಿಡಿಯೋ ದೃಶ್ಯಗಳು ಬಹಿರಂಗವಾಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ಹಾಗೂ ಪಕ್ಷದ ಮುಖಂಡರುಗಳ ಮೇಲೆ ಆರೋಪ ಮಾಡುವ ಕುತಂತ್ರ ನಡೆಸಿರುವುದು ಆತನ ದೂರವಾಣಿ ಸಂಭಾಷಣೆಯಿಂದ ಬಹಿರಂಗವಾಗಿದೆ, ಆದ್ದರಿಂದ ಈ ಕೂಡಲೇ ಅವನ ಹಿಂದೆ ಇರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವನನ್ನು ಬೆಂಬಲಿಸುತ್ತಿರುವ ನಾಯಕರ ವಿರುದ್ಧ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
