ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ವಿಶೇಷ ತನಿಖಾ ಅಧಿಕಾರಿಗಳು ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್​ ಮತ್ತು ಕಚೇರಿಯ ಸಿಬ್ಬಂದಿ ಚೇತನ್​​ನನ್ನು ವಶಕ್ಕೆ ಪಡೆದುಕೊಂಡು ಹಾಸನದ ಸೆನ್ ಠಾಣೆಯಲ್ಲಿ ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಆರ್. ಅಶೋಕ್ ಶಾಕಿಂಗ್ ಹೇಳಿಕೆ
ಪ್ರಕರಣ ಸಂಬಂಧ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚಿಸಿತು. ಬಳಿಕ ಪ್ರಕರಣ ಎಸ್​ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್​ಐಟಿ ಹಲವು ತಂಡಗಳನ್ನು ರಚಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ.
ಕ್ರಿಕೆಟ್ ಲೋಕದ GOAT ಜೇಮ್ಸ್ ಆಂಡರ್ಸನ್ ನಿವೃತ್ತಿ ಘೋಷಣೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 12 =
Remember me
