ಬೆಂಗಳೂರು:ರಾಷ್ಟ್ರ ರಾಜಕಾರಣದಲ್ಲಿ ವ್ಯಾಕ ಚರ್ಚೆಗೆ ಆಸ್ಪದ ಮಾಡಿಕೊಟ್ಟಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ಪ್ರಕರಣದ ಕುರಿತು ಪ್ರಜ್ವಲ್​ ಮಾತನಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಂಸದ ಪ್ರಜ್ವಲ್​ ರೇವಣ್ಣ, ಸತ್ಯ ಆದಷ್ಟು ಬೇಗ ಹೊರಬರಲಿದೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ CIDಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ.ಸತ್ಯ ಆದಷ್ಟು ಬೇಗ ಹೊರಬರಲಿದೆ.As I am not in Bangalore to attend the enquiry, I have communicated to C.I.D Bangalore through my Advocate. Truth will prevail soon.pic.twitter.com/lyU7YUoJem
ಇದನ್ನೂ ಓದಿ:ಈ ಸಂಘಿ ಸರ್ಕಾರವನ್ನು ಓಡಿಸಲು ಜಿಹಾದ್​ಗೆ ಮತ ನೀಡಿ: ಕಾಂಗ್ರೆಸ್​ ನಾಯಕಿ
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆ‌ರ್.ಪಿ.ಸಿ ದಿನಾಂಕ:30-04-2024ರ ತಮ್ಮ ನೋಟಿಸ್​ನಲ್ಲಿ ತಾವು ದಿನಾಂಕ: 01-05-2024 ರಂದು ತಮ್ಮ ಮುಂದೆ. ಹಾಜರಾಗಲು ತಿಳಿಸಿರುತ್ತೀರಿ.
ಆದರೆ ನನ್ನ ಕಕ್ಷಿದಾರರಾದಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಿದ್ದು, ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದು, ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ಪ್ರಜ್ವಲ್​ ವಕೀಲರು CIDಗೆ ನೀಡಲಾಗಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 7 =
Remember me
