ಬೆಂಗಳೂರು:ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ ಹಾಸನ ಸಂಸದರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪ್ರಕರಣದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವೀಡಿಯೊಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ, ಗೌರವಗಳಿಗೆ ಧಕ್ಕೆ ಉಂಟು ಮಾಡಿವೆ.
ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ತನಿಖಾದಳ ಈಗಾಗಲೇ ತನ್ನ ಕಾರ್ಯ ಪ್ರಾರಂಭಿಸಿದೆ. ಕಾರಣ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 1 =
Remember me
