
ಬೆಂಗಳೂರು:ಹೀ ಈಸ್ ಎ ಯಂಗ್ ಲೀಡರ್ ವಿತ್ ಗ್ರೇಟ್ ವಿಶನ್.2019 ರ ಏಪ್ರಿಲ್ 17 ರಂದು ಕಡೂರಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಹೇಳಿದ್ದ ಮಾತಿದು. ಈಗ ಎಲ್ಲವನ್ನೂ ಮರೆತು ಏನು ಮಾತನಾಡುತ್ತಿದ್ದೀರಿ ಸಿದ್ದರಾಮಯ್ಯ? ಎಂದು ಆಗಿನ ಅವರ ಭಾಷಣದ ತುಣುಕು ಪ್ರದರ್ಶನ ಮಾಡಿ ಪ್ರಶ್ನಿಸಿದರು.ಪ್ರಜ್ವಲ್ ರೇವಣ್ಣನನ್ನು ಈಗ ರೇಪಿಸ್ಟ್ ಎಂದು ಕರೆಯುವ ನಿಮಗೆ, ಇವರನ್ನು ಗೆಲ್ಲಿಸಿಕೊಡಿ ಎಂದು ಜನರಲ್ಲಿ ಮನವಿ ಮಾಡಿದ್ದು ಮರೆತು ಹೋಯಿತೇ? ಎಂದು ಕೇಳಿದರು.ಪ್ರಜ್ವಲ್ ರೇವಣ್ಣ ಇನ್ನೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್‌ಡಿಎ ಅಭ್ಯರ್ಥಿಯಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಸ್ಪಷ್ಪಪಡಿಸಿದರು.ಪ್ರಜ್ವಲ್ ರೇವಣ್ಣ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವ ಸಮಯದಲ್ಲಿ ನಡೆದಿದೆ ಎಂದು ಇನ್ನೂ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಗೆದ್ದಿಲ್ಲ. ಈಗ ಪ್ರಜ್ವಲ್ ಸಂಸದರಾಗಿರುವುದು ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲೇ. ಜೆಡಿಎಸ್ ಪಕ್ಷ ಈಗಾಗಲೇ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಂಡಿದೆ ಎಂದರು.
ಪ್ರಜ್ವಲ್ ಗೆದ್ದರೆ ಶಿಸ್ತಿನ ಕ್ರಮಪ್ರಜ್ವಲ್ ರೇವಣ್ಣನನ್ನು ಈಗ ರೇಪಿಸ್ಟ್ ಎಂದು ಕರೆಯುವ ಸಿದ್ದರಾಮಯ್ಯ, ತೆನೆ ಹೊತ್ತ ಮಹಿಳೆಗೆ ಶಕ್ತಿ ನೀಡಿ ಎಂದು ಅವರೇ ಹೇಳಿದ್ದರು. ಆಗ ಟ್ವೀಟ್ ಮಾಡಿ, ಐ ರಿಕ್ವೆಸ್ಟ್ ಎವರಿವನ್ ಟು ಕಾಸ್ಟ್ ದೇರ್ ವೋಟ್ಸ್ ಇನ್ ಹೀಸ್ ಫೇವರ್ ಎಂದು ಮನವಿ ಮಾಡಿದ್ದರು. ಮೈತ್ರಿ ಬಲಪಡಿಸಿ ಎಂದು ಕೋರಿದ್ದರು. ಪ್ರಜ್ವಲ್ ರೇವಣ್ಣ ಈಗಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದಲೇ ಸಂಸದರಾಗಿ ಇದ್ದಾರೆ. ಈ ಚುನಾವಣೆಯಲ್ಲಿ ಗೆದ್ದು ಅವರು ಎನ್‌ಡಿಎ ಸಂಸದರಾದರೆ ನಂತರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ರಾಜ್ಯ ಸರ್ಕಾರದ ವೈಲ್ಯಸಚಿವ ಎಂ.ಬಿ.ಪಾಟೀಲ್ ಅವರು ಪಾತಾಳಕ್ಕೆ ಹೋಗುವುದು ಬೇಡ, ಭೂಮಿಯಲ್ಲಿದ್ದಾಗಲೇ ಪ್ರಜ್ವಲ್‌ನನ್ನು ಬಂಧಿಸಬಹುದಿತ್ತು. ಆದರೆ ಆ ಕೆಲಸವನ್ನು ಸರ್ಕಾರ ಮಾಡಿಲ್ಲ ಎಂದರು.ಯಾವುದೇ ಕೇಂದ್ರ ಸರ್ಕಾರ ಸಂಸದರಿಗೆ ಸಹಜವಾಗಿಯೇ ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡುತ್ತದೆ. ಅದನ್ನು ಪ್ರಧಾನಿ ನರೇಂದ್ರ ಮೋದಿ ನೀಡಿಲ್ಲ. ರಾಜ್ಯದ ಗುಪ್ತಚರ ಇಲಾಖೆ ಸರಿಯಾಗಿ ಇದ್ದಿದ್ದರೆ, ಪ್ರಜ್ವಲ್ ತಪ್ಪಿಸಿಕೊಂಡು ಹೋಗುತ್ತಾರೆ, ದೇಶ ಬಿಡಲು ಅವಕಾಶ ನೀಡಬಾರದು ಎಂದು ವಿಮಾನ ನಿಲ್ದಾಣಕ್ಕೆ ಪ್ರಾಧಿಕಾರಕ್ಕೆ ತಿಳಿಸಬಹುದಿತ್ತು. ಅದನ್ನು ಈ ಸರ್ಕಾರ ಮಾಡಲಿಲ್ಲ ಎಂದರು.ಶಾಸಕ ರೇವಣ್ಣ ಅವರ ಬಂಧನ ಸರಿಯಾಗಿಯೇ ಇದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.ಪ್ರಕರಣದ ಬಗ್ಗೆ ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಬಿಜೆಪಿಗೂ ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
