ಬೆಂಗಳೂರು:ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ದಾರಿ ತಪ್ಪಿದ್ದಾರೆ. ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.
ಮಂಡ್ಯದ ಮಗ ಯಾರು, ಕಳ್ಳನನ್ನ ಮಗ ಯಾರು ಎಂದು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಜನರು ನಿರ್ಧರಿಸುತ್ತಾರೆ ಎಂಬ ಪ್ರಕಾಶ್ ರೈ ಹೇಳಿಕೆಗೆ ಜೆಡಿಎಸ್ ತಿರುಗೇಟು ಕೊಟ್ಟಿದೆ. ಪ್ರಕಾಶ್‌ರಾಜ್ ದಾರಿ ತಪ್ಪಿರುವುದಕ್ಕೆ ಸಾಕ್ಷ್ಯವಿದೆ. ಸರ್ಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? ಎಂದು ಪ್ರಶ್ನಿಸಿದೆ.
ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರ್ಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೆಯ ಆಹಾರವಿಲ್ಲ, ನೀರೂ ಇಲ್ಲ. ಸರ್ಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ ನಿರ್ದಿಗಂತಕ್ಕೆ ಹಣದ ಹೊಳೆ ಸರ್ಕಾರ ಹರಿಸುತ್ತಿದೆ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಸಿಫ್ರಂಟ್ ಎಂಬ ಮಟ್ಟು-ಪಟ್ಟಿನ ಕಂಪನಿಗೆ ಕೋಟಿ ಕೋಟಿ ಸುರಿದಿರುವ ಕಾಂಗ್ರೆಸ್ ಸರ್ಕಾರ, ನಿಮ್ಮ ನಿರ್ದಿಗಂತಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯುವವರು ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವುವರು ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ ಹೇಗೆ? ಎಂದು ಜೆಡಿಎಸ್ ಪ್ರಕಾಶ್ ರೈ ಅವರನ್ನು ಪ್ರಶ್ನಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
