ಬೆಂಗಳೂರು:ಈದ್ ಮಿಲದ್ ಮೆರವಣಿಗೆಯ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಂಭವಿಸಿದ ಗಲಭೆಗೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಘಟನೆ ಬಗ್ಗೆ ಭಾರತದ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.
ಇದನ್ನೂ ಓದಿ:ಮಹಾತ್ಮ ಗಾಂಧಿ-ಶಾಸ್ತ್ರೀಜಿ ದೇಶ ಕಂಡ ಅಪ್ರತಿಮ ನಾಯಕರು: ಸಂಸದ ರಮೇಶ ಜಿಗಜಿಣಗಿ
ಈ ಕುರಿತಂತೆ ಟ್ವೀಟ್​ ಮಾಡಿರುವ ಅವರು, “ಅಂದು ನಾಡ ವಿರೋಧಿ ಟಿಪ್ಪುವಿನ ವಿಜೃಂಭಣೆ ಇಂದು ರಾಷ್ಟ್ರ ವಿರೋಧಿ ಔರಂಗಜೇಬನ ವಿಜೃಂಭಣೆ, ಎತ್ತ ಸಾಗುತ್ತಿದೆ ಕರ್ನಾಟಕ? ಶಿವಮೊಗ್ಗದಲ್ಲಿ ನಡೆದ ಘಟನೆ ನೇರವಾಗಿ ರಾಜ್ಯ ಕಾಂಗ್ರೆಸ್ ಸರಕಾರ ಬೆಂಬಲವಾಗಿ ನಿಂತಿದೆ ಮತ್ತು ಕರ್ನಾಟಕವನ್ನು ಗೂಂಡಾರಾಜ್ಯ ಮಾಡಲು ಪಣತೊಟ್ಟಂತಿದೆ” ಎಂದು ಹೇಳಿದ್ದಾರೆ.
ಅಂದು ನಾಡ ವಿರೋಧಿ ಟಿಪ್ಪುವಿನ ವಿಜೃಂಭಣೆ ಇಂದು ರಾಷ್ಟ್ರ ವಿರೋಧಿ ಔರಂಗಜೇಬನ ವಿಜೃಂಭಣೆ, ಎತ್ತ ಸಾಗುತ್ತಿದೆ ಕರ್ನಾಟಕ?
ಶಿವಮೊಗ್ಗದಲ್ಲಿ ನಡೆದ ಘಟನೆ ನೇರವಾಗಿ ರಾಜ್ಯ ಕಾಂಗ್ರೆಸ್ ಸರಕಾರ ಬೆಂಬಲವಾಗಿ ನಿಂತಿದೆ ಮತ್ತು ಕರ್ನಾಟಕವನ್ನು ಗೂಂಡಾರಾಜ್ಯ ಮಾಡಲು ಪಣತೊಟ್ಟಂತಿದೆ
ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ…pic.twitter.com/2nHe5RHYjV
— Pralhad Joshi (@JoshiPralhad)October 2, 2023

“ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹಿಂದೂಗಳ ಹಬ್ಬಕ್ಕೆ ನಿರ್ಬಂಧ, ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ(ಮೆರವಣಿಗೆಗೆ) ಬೆಂಬಲ. ಮತಾಂಧ ಶಕ್ತಿಗಳನ್ನು ಪೋಷಿಸಿ ಬೆಳೆಸಲೆಂದೇ ಅಧಿಕಾರಕ್ಕೆ ಬಂದ ಸರಕಾರವಿದು” ಎಂದು ಬರೆಯುವುದರ ಜತೆಗೆ ವಿಡಿಯೋ ಕೂಡ ಪೋಸ್ಟ್ ಮಾಡಿದ್ದಾರೆ.
ಭರದಿಂದ ಸಾಗುತ್ತಿದೆ ‘ಅಯಾಲನ್’; ಮತ್ತೊಂದು ಸೈನ್ಸ್​-ಫಿಕ್ಷನ್​ ಚಿತ್ರ ತೆರೆಗೆ ಬರಲು ಸಿದ್ಧ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
