ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಬೇಕೆಂದು ನಾವು ನಮ್ಮ ಅಭಿಪ್ರಾಯ ಹೇಳಿದ್ದೇವೆ. ನಾನು ಮತ್ತು ಶೆಟ್ಟರ್ ಒಟ್ಟಿಗೆ ಸೇರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಹುಬ್ಬಳ್ಳಿ ಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೆಟ್ಟರ್ ಅವರಿಗೆ ಟಿಕೆಟ್ ಹಂಚಿಕೆ ವಿಷಯದಲ್ಲಿ ಎಲ್ಲವೂ ಒಂದೆರಡು ದಿನಗಳಲ್ಲಿ ಸುರಳಿತವಾಗಲಿದೆ ಎಂದರು.
ಇದನ್ನೂ ಓದಿ:7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಕಪ್ಪೆಯನ್ನು ಗುರುತಿಸಿ!
ಶಾಸಕ ಸಿ.ಎಂ. ನಿಂಬಣ್ಣವರ ಅವರು ಪಕ್ಷದಲ್ಲಿ ಹಿರಿಯರು. ಟಿಕೆಟ್ ಕೈ ತಪ್ಪಿರುವುದಕ್ಕೆ ನನ್ನ ಬಗ್ಗೆ ಸಿಟ್ಟಿನಿಂದ ಮಾತನಾಡಿದ್ದಾರೆ. ಅವರೊಂದಿಗೆ ಹಾಗೂ ಅವರ ಮಗನೊಂದಿಗೆ ಫೋನ್ ನಲ್ಲಿ ಮಾತನಾಡಿದ್ದೇನೆ. ಇಂದು ನಿಂಬಣ್ಣವರ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ. ಅವರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ಚಾಸವಿದೆ ಎಂದರು.
ಕಾಂಗ್ರೆಸ್ ಕಾಲದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಸಿಗಬೇಕಾದ ಗೌರವ ಸಿಕ್ಕಿರಲಿಲ್ಲ. ನಾವು ಅಧಿಕಾರಕ್ಕೆ ಬಂದ ಮೇಲೆ ಅಂಬೇಡ್ಕರ್ ಹುಟ್ಟಿದ ಸ್ಥಳ, ಬೌದ್ಧ ಧರ್ಮ ಸ್ವೀಕರಿಸಿದ ಸ್ಥಳ ಅಭಿವೃದ್ಧಿ ಪಡಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿದ್ದೇವೆ ಎಂದರು.
7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಕಪ್ಪೆಯನ್ನು ಗುರುತಿಸಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × one =
Remember me
