ಹುಬ್ಬಳ್ಳಿ:ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪುತ್ಥಳಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಒಂದು ವೇಳೆ ನಿರ್ಮಾಣ ಮಾಡಿದರೆ ಅದನ್ನು ಒಡೆದು ಹಾಕುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ಎಚ್ಚರಿಸಿದ್ದಾರೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್​, ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರು ಟಿಪ್ಪು ಪುತ್ಥಳಿ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಮತ್ತು ಮೈಸೂರು ಜಿಲ್ಲಾಡಳಿತ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
ಭಾರತ ಮತ್ತು ಪಾಕಿಸ್ತಾನ ಇಬ್ಭಾಗವಾದ ದೇಶಗಳು. ಮುಸ್ಲಿಮರು ಹೇಗೆ ಪಾಕಿಸ್ತಾನಕ್ಕೆ ಹೋಗಿ ಮುಸ್ಲಿಂ ರಾಷ್ಟ್ರವಾಯಿತೋ ಅದೇ ರೀತಿ ಭಾರತವೂ ಹಿಂದೂ ರಾಷ್ಟ್ರವಾಗಿದೆ. ಒಂದೇ ದೇಶದಲ್ಲಿ ಎರಡು ಧರ್ಮೀಯರು ಇರಬಾರದು ಎಂಬ ಉದ್ದೇಶದಿಂದಲೇ ಗಾಂಧೀಜಿ ಹಾಗೂ ಜಿನ್ನಾ ದೇಶವನ್ನು ಇಬ್ಭಾಗ ಮಾಡಿದರು ಎಂದರು.
ಚುನಾವಣೆಯಲ್ಲಿ ಸ್ಪರ್ಧೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ನಿಶ್ಚಯ. ನನ್ನಂಥವರು ಬಿಜೆಪಿಗೆ ಬೇಡವಾಗಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸುವ ಇಚ್ಛೆಯೂ ನನಗಿಲ್ಲ. ಬೆಂಬಲದ ಅವಶ್ಯಕತೆಯೂ ಇಲ್ಲ. ಕ್ಷೇತ್ರ ಯಾವುದು ಎಂದು ನಿರ್ಧಾರ ಮಾಡಿಲ್ಲ. ಕಾರ್ಕಳ, ಪುತ್ತೂರು, ಉಡುಪಿ, ಜಮಖಂಡಿ, ತೇರದಾಳ, ಹಳಿಯಾಳ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಜೆಡಿಎಸ್​: ಸಮಸ್ತ ಕನ್ನಡಿಗರು-ನಾಡಪ್ರಭು ಕೆಂಪೇಗೌಡರಿಗೂ ಅವಮಾನಿಸಿದ ಬಿಜೆಪಿ…

ನಾಪತ್ತೆಯಾಗಿದ್ದ ದಂತ ವೈದ್ಯ ಡಾ. ಕೃಷ್ಣಮೂರ್ತಿ ಕುಂದಾಪುರದಲ್ಲಿ ಶವವಾಗಿ ಪತ್ತೆ!

ಸಿಎಂ ಕಾರ್ಯಕ್ರಮಕ್ಕೆ ಕಡ್ಡಾಯ ಹಾಜರಾತಿ ಸುತ್ತೋಲೆ: ಬೈಂದೂರು ಬಿಇಒಗೆ ಅಮಾನತು ಶಿಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
