ಉಡುಪಿ:ರಾಜ್ಯ ಸರ್ಕಾರ ಮದ್ಯಪಾನದ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿರುವು ಆಘಾತಕಾರಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮದ್ಯ ಸೇವನೆ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿದೆ. ದೇಶದಾದ್ಯಂತ ಮದ್ಯಪಾನವನ್ನು ನಿಷೇಧ ಮಾಡಬೇಕೆಂದು ಗಾಂಧೀಜಿ 75 ವರ್ಷದ ಹಿಂದೆಯೇ ಸಲಹೆ ಕೊಟ್ಟಿದ್ದರು. ಆದರೆ ಮದ್ಯಪಾನವನ್ನೇ ಅನುಸರಿಸಿ ಸರಕಾರಗಳು ರಾಜಕಾರಣ ಮಾಡುತ್ತಿವೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದರು.ಇದನ್ನೂ ಓದಿ:ಮೋದಿ ಕೈಕೆಳಗೆ ಕೆಲಸ ಮಾಡಲು ಇಷ್ಟ…ಅವರೇ ನನ್ನ ಪಾಲಿನ ದೇವರು; ಪ್ರತಾಪ್ ಸಿಂಹ
ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಮಧ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. ಇದನ್ನು ಅರಿತರೂ ಸರ್ಕಾರ ಮಾತ್ರ ಮದ್ಯಪಾನಕ್ಕೆ ಕಡಿವಾಣ ಹಾಕದೆ ಪ್ರೋತ್ಸಾಹ ಮಾಡುತ್ತಾ ಬರುತ್ತಿದೆ. ರಾಜ್ಯ ಸರ್ಕಾರ ಈ ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳಬೇಕು. ಯುವಕರು ತಪ್ಪು ದಾರಿಗೆ ಇಳಿಯುವುದನ್ನು ತಪ್ಪಿಸಿಬೇಕಿದೆ ಎಂದರು.
ಮದ್ಯಪಾನ ಮುಕ್ತ ಸಮಾಜವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದರು. ಈ ವಿಚಾರವಾಗಿ ಅವರ ರಾಜ್ಯಸಭೆಯಲ್ಲಿ ಈ ಬಗ್ಗೆ ಧ್ವನಿ ಎತ್ತಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತಿಳಿ ಹೇಳಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದರು.ಇದನ್ನೂ ಓದಿ:VIDEO | ನೀವೇ ಸಿಎಂ ಎಂದು ಗೊತ್ತಾಗಿಲ್ಲ! ಬೆಳ್ಳಂಬೆಳಗ್ಗೆ ಚಹಾ ಅಂಗಡಿಯವನಿಗೆ ಶಾಕ್ ಕೊಟ್ಟ ಮುಖ್ಯಮಂತ್ರಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − one =
Remember me
