ಮಂಡ್ಯ:ಡ್ರಗ್ಸ್ ದಂಧೆಯಲ್ಲಿ ಶಾಸಕ ಜಮೀರ್ ಅಹ್ಮದ್ ಪಾತ್ರ ಶೇ.100ರಷ್ಟು ಇದೆ. ರಾಜಕಾರಣದಲ್ಲಿ ವ್ಯವಹಾರ ಇಟ್ಟುಕೊಂಡಿರುವುದರಿಂದ ಅವರ​ನ್ನು ಅರೆಸ್ಟ್ ಮಾಡ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್, ಇದೀಗ ಮತ್ತೊಂದು ಬಾಂಬ್​ ಸಿಡಿಸಿದ್ದಾರೆ.
ಮೊನ್ನೆಯಷ್ಟೇ ಮೈಸೂರಿನ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್​ ಸಿಗುತ್ತಿದೆ ಎಂದಿದ್ದ ಮುತಾಲಿಕ್​, ನಾಲ್ಕೈದು ವಿದ್ಯಾಸಂಸ್ಥೆಗಳ ಹೆಸರನ್ನೂ ಉಲ್ಲೇಖಿಸಿದ್ದರು. ಕಾಂಗ್ರೆಸ್​, ಜೆಡಿಎಸ್​, ಬಿಜೆಪಿ ಮೂರು ಪಕ್ಷದವರ ಕೈವಾಡ ಡ್ರಗ್ಸ್​ ಮಾಫಿಯಾದಲ್ಲಿದೆ ಎಂದೂ ಹೇಳಿದ್ದರು. ಶನಿವಾರ ಮಂಡ್ಯದಲ್ಲಿ ಮಾತನಾಡಿದ ಮುತಾಲಿಕ್​, ಡ್ರಗ್ಸ್​ ದಂಧೆಯಲ್ಲಿ ಬರೋಬ್ಬರಿ 32 ರಾಜಕಾರಣಿಗಳಿದ್ದು, ಈ ಬಗ್ಗೆ ಹೋಂ ಮಿನಿಸ್ಟರ್‌ಗೆ ಆಧಾರ ಸಹಿತ ಲಿಸ್ಟ್​ ಕೊಡ್ತೀನಿ ಎನ್ನುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.
ಇದನ್ನೂ ಓದಿರಿರಾಜ್ಯ ಸರ್ಕಾರಕ್ಕೆ ಬಂಪರ್​ ಆಫರ್​ ಕೊಟ್ಟ ಶಾಸಕ ಜಮೀರ್​
ರಾಜಕಾರಣಿಗಳದ್ದೇ ಪಬ್, ಕ್ಲಬ್, ಬಾರ್​ಗಳಿವೆ. ಅವರಿಗೆ ಸಾವಿರಾರು ಕೋಟಿ ರೂ. ವ್ಯಾಪಾರ ಆಗುತ್ತಿರುವುದೇ ಡ್ರಗ್ಸ್‌ನಿಂದ. ವೈನ್ ಲಾಬಿ, ಡ್ರಗ್ಸ್​ ಲಾಬಿ‌ ರಾಜಕೀಯವನ್ನು ಕೈಯಲ್ಲಿ ಹಿಡಿದುಕೊಂಡಿದೆ. ಈ ಮಾಫಿಯಾದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ನವರೂ ಇದ್ದಾರೆ ಎಂದರು.
8 ಮತ್ತು 9ನೇ ತರಗತಿ ಮಕ್ಕಳವರೆಗೆ ಡ್ರಗ್ಸ್ ಪ್ರವೇಶ ಮಾಡಿದೆ. ಮೈಸೂರಿನ ಶಾಲೆಯಲ್ಲಿ ಒಬ್ಬ ಹುಡುಗ ಪೆನ್ ಮೂಸಿ ನೋಡುತ್ತಿದ್ದ. ಅದರೊಳಗೆ ಡ್ರಗ್ಸ್ ಇತ್ತು. ತನಿಖೆ ಮಾಡಿದ್ರೆ 10 ಜನ ವಿದ್ಯಾರ್ಥಿ ಆ ಜಾಲದಲ್ಲಿ ಇರುವುದು ಗೊತ್ತಾಯಿತು ಎನ್ನುವ ಮೂಲಕ ಡ್ರಗ್ಸ್​ ಜಾಲದ ಭೀಕರತೆಯನ್ನು ಸೂಚ್ಯವಾಗಿ ವಿವರಿಸಿದರು.
‘ಏನಪ್ಪ ಜಮೀರ್ ನಿನ್ನ ಹೆಸರು ಮೀಡಿಯಾದಲ್ಲಿ ಬರ್ತಿದೆ…’

ಡೋಪಿಂಗ್​ ಟೆಸ್ಟ್​ಗೆ ಯೂರಿನ್​ ಕೇಳಿದ್ರೆ ರಾಗಿಣಿ ಕೊಟ್ಟದ್ದು ಮಾತ್ರ ಬೇರೇನೋ…

ಹಳ್ಳಿಯಲ್ಲಿ ಒಂಟಿಮನೆ ಬಾಡಿಗೆ ಪಡೆದ ಯುವಕ ರಾತ್ರಿಯಾಗುತ್ತಿದ್ದಂತೆ ತನ್ನ ವರಸೆ ಬದಲಿಸುತ್ತಿದ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
