ಬೆಂಗಳೂರು:ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದಕ್ಕೆ ಬಿಜೆಪಿ ಜತೆ ಗುರುತಿಸಿಕೊಂಡಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆ.
ಪ್ರಶಾಂತ್​ ಸಂಬರಗಿ ತಮ್ಮ ಫೇಸ್​​ಬುಕ್​ ಖಾತೆಯಲ್ಲಿ ಶಿವರಾಜ್ ಕುಮಾರ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡಿದ್ದು, ‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ, ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ, ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲ್ಮ್ ಗೆ ಸೈನ್ ಮಾಡ್ಬಿಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು, ಸೋತ್ರೆ ಏನು, ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ… ಇಲ್ಲ ಅಂದ್ರೆ…! ಬಂತಾ ಪ್ಯಾಕೆಟ್… ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದಿದ್ದಾರೆ.
ಇದನ್ನೂ ಓದಿ:ಜನರ ಹಣ ಖರ್ಚು ಮಾಡದೇ ಪ್ರಚಾರ ಮಾಡುವುದು ಹೇಗೆ? ಐಡಿಯಾ ಕೊಡಿ ಎಂದ ನಟ ಉಪೇಂದ್ರ
ಪ್ರಶಾಂತ್ ಸಂಬರ್ಗಿ ಅವರ ಈ ಪೋಸ್ಟ್​​​ಗೆ ಶಿವರಾಜ್ ಕುಮಾರ್ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ತಮ್ಮ ವಿರುದ್ಧ ಕಾಮೆಂಟ್ ಮಾಡಿದವರನ್ನು ಡಿಲೀಟ್ ಮಾಡಿ, ಡಸ್ಟ್​​​ಬಿನ್​​ಗೆ ಹಾಕಲಾಗುವುದು ಎಂದು ಪ್ರಶಾಂತ್ ತಿರುಗೇಟು ನೀಡಿದ್ದಾರೆ.
ಸೈಕ್ಲೋನ್​ ಎಫೆಕ್ಟ್​​; ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
