ಬೆಂಗಳೂರು:ಸಂಸತ್ ಪ್ರವೇಶಕ್ಕೆ ಪಾಸ್ ಕೊಟ್ಟು ಭದ್ರತಾ ವೈಫಲ್ಯಕ್ಕೆ ಕಾರಣರಾಗಿರುವ ಕರ್ನಾಟಕ ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡಬೇಕಿದೆ. ಆದರೆ, ಭದ್ರತಾ ಲೋಪದ ಬಗ್ಗೆ ಗೃಹ ಸಚಿವರು ಉತ್ತರ ಕೊಡಬೇಕು ಎಂದು ಹೇಳಿದ್ದಕ್ಕೆ ಪ್ರತಿಪಕ್ಷದವರನ್ನು ಅಮಾನತು ಮಾಡುವುದು ಖಂಡನಾರ್ಹ ಎಂದು ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷಗಳ 141 ಸಂಸದರನ್ನು ಅಮಾನತು ಮಾಡಿರುವುದು ನಿಜಕ್ಕೂ ಖಂಡನೀಯ. ಭಾರತೀಯ ಸಂಸತ್ ವ್ಯವಸ್ಥೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸಂಸದರನ್ನು ಅಮಾನತು ಮಾಡಿರುವುದು ಇದೇ ಮೊದಲು ಎಂದಿದ್ದಾರೆ.ಸಂಸತ್ ಭವನದ ರಕ್ಷಣಾ ವೈಫಲ್ಯದ ಬಗ್ಗೆ ಉತ್ತರ ಕೊಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳು ನ್ಯಾಯಯುತವಾಗಿ ಸಂಸತ್ ಕಲಾಪದಲ್ಲಿ ಆಗ್ರಹಿಸಿವೆ. ಆದರೆ, ಪ್ರತಿಪಕ್ಷಗಳ ಮಾತಿಗೆ ಕೇಂದ್ರ ಸರ್ಕಾರವು ಮನ್ನಣೆ ನೀಡದೆ ಹಿಟ್ಲರ್ ಧೋರಣೆ ತಾಳಿದೆ ಎಂದು ಟೀಕಿಸಿದ್ದಾರೆ.ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ ಸಂಸತ್ತಿನ ಮೇಲಿನ ದಾಳಿಯ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಅವರು ಆಗ್ರಹಿಸಿರುವ ಅವರು ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್ ಶಾ ಅವರ ಕರ್ತವ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × five =
Remember me
