– ‘ಕಷ್ಟಕಾಲದಲ್ಲಿ ಬೆನ್ನಿಗೆ ನಿಂತ ಕುಮಾರಣ್ಣಾ ನಿಮಗೆ ಥ್ಯಾಂಕ್ಸ್’ ಎಂದು ಪ್ರತಾಪ್ ಸಿಂಹ
ಬೆಂಗಳೂರು:ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ಹಾಕಿ ಬರೆದಿರುವ ಸಾಲುಗಳು ಭಾರೀ ವೈರಲ್ ಆಗಿದೆ.
ಕುಮಾರಸ್ವಾಮಿಯನ್ನು ಭೇಟಿ ಮಾಡಿರುವ ಪ್ರತಾಪ್ ಸಿಂಹ, ಅವರ ಕಾಲಿಗೆ ನಮಸ್ಕರಿಸಿ ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ನಿಮಗೆ ಧನ್ಯವಾದ ಕುಮಾರಣ್ಣ ಎಂದು ಹೇಳಿದ್ದಲ್ಲದೆ ತಮ್ಮ ಭಾವನೆಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕೂಡ ಹಂಚಿಕೊಂಡಿದ್ದಾರೆ.
ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ@hd_kumaraswamyಧನ್ಯವಾದಗಳನ್ನು ಖುದ್ದು ತಿಳಿಸಿದ ಸಂದರ್ಭ.pic.twitter.com/u5P0t3GlKq
— Prathap Simha (@mepratap)January 12, 2024

ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಳಗ್ಗೆ ಅವರ ಬಿಡದಿ ತೋಟದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದ ಮುಂಬರುವ ಲೋಕಸಭೆ ಚುನಾವಣೆ ಸಂಬಂಧ ಹೀಗೆ ಹಲವು ವಿಷಯಗಳಿಗೆ ಸಂಸದ ಪ್ರತಾಪ್ ಸಿಂಹ ಸುದ್ದಿಯಲ್ಲಿರುತ್ತಾರೆ.ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡದ್ದು ಗೊತ್ತೇ ಇದೆ. ಮೈಸೂರು, ಮಂಡ್ಯ ಕ್ಷೇತ್ರಗಳ ಟಿಕೆಟ್ ಗೆ ಜೆಡಿಎಸ್ ಆಕಾಂಕ್ಷಿಯಾಗಿದೆ ಎಂಬ ವದಂತಿ ಕೂಡ ಇದೆ.
‘ರಾಮ್ ಹಲವಾ’ ಶ್ರೀರಾಮಮಂದಿರ ಪ್ರಸಾದ ಅಡುಗೆ ಮಾಡುವ ಬಾಣಸಿಗನ ಹೆಸರಲ್ಲಿವೆ 12 ವಿಶ್ವ ದಾಖಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − two =
Remember me
