ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕೆಂದು ಸರ್ಕಾರವೇ ಕಡ್ಡಾಯ ಮಾಡಿದ್ದರೂ ಇಂದು ಮಾಸ್ಕ್ ಧರಿಸದೆ ವಿಧಾನಸೌಧಕ್ಕೆ ಬಂದ ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಅವರಿಗೆ ಭದ್ರತಾ ಸಿಬ್ಬಂದಿ ಪ್ರವೇಶ ನಿರಾಕರಿಸಿದ ಪ್ರಸಂಗ ನಡೆದಿದೆ.
ಶುಕ್ರವಾರ ಬೆಳಗ್ಗೆ ವಿಧಾನಸೌಧದ ಪಶ್ಚಿಮ ಗೇಟ್‌ಗೆ ಆಗಮಿಸಿದ ಪ್ರತಾಪ್‌ಸಿಂಹ ಮಾಸ್ಕ್ ಧರಿಸದೇ ಇರುವುದನ್ನು ಅಲ್ಲಿದ್ದ ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರು ಗಮನಿಸಿದರು. ನೇರವಾಗಿ ಒಳಹೋಗುತ್ತಿದ್ದ ಅವರನ್ನು ಕೈ ಮಾಡಿ ನಿಲ್ಲಿಸಿದರು. ‘‘ಸಾರ್, ಮಾಸ್ಕ್ ಹಾಕಿಕೊಂಡೇ ಬರಬೇಕು’’ ಎಂದು ಸೂಚಿಸಿದರು. ಇದರಿಂದ ವಿಚಲಿತರಾಗದ ಪ್ರತಾಪ್‌ಸಿಂಹ, ತಕ್ಷಣವೇ ತಮ್ಮ ತಪ್ಪು ಅರಿತುಕೊಂಡು ವಾಪಸ್ ಕಾರಿನತ್ತ ತೆರಳಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಘರ್ಷಣೆ ನಡುವೆಯೇ ಕಾಮಗಾರಿ; ಸಿದ್ಧವಾಯಿತು ಗಲ್ವಾನ್​ ನದಿಯ ಸೇತುವೆ
ನಿನ್ನೆಯಷ್ಟೇ ರಾಜ್ಯ ಸರ್ಕಾರ ಮಾಸ್ಕ್ ದಿನ ಆಚರಿಸಿ, ಮಾಸ್ಕ್ ಧರಿಸುವುದರ ಕುರಿತು ಜಾಗೃತಿ ಮೂಡಿಸಿದೆ. ಅದಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ 200 ರೂ. ದಂಡ ವಿಧಿಸುವುದಾಗಿಯೂ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ.
ಸಿದ್ಧಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕರೊನಾ: ಇತರ 400 ವಿದ್ಯಾರ್ಥಿಗಳಿಗೆ ಆತಂಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 3 =
Remember me
