ಬೆಂಗಳೂರು:ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಮಸ್ಕಿ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಹೇಳಿದರು.ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ಕಿ ಉಪ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿ ಕೂಡ ಹೌದು ಎಂದರು. ಸರ್ಕಾರ ರಚನೆ ಮಾಡುವ ವೇಳೆ 17 ಜನರಿಗೂ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಮುಖ್ಯಮಂತ್ರಿ ಆ ಭರವಸೆ ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಹಣಕ್ಕಾಗಿ ಬಿಜೆಪಿಗೆ ಬಂದಿಲ್ಲ:ನಾನು ಹಣಕ್ಕಾಗಿ ಬಿಜೆಪಿಗೆ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಮೆಚ್ಚಿ ಬಿಜೆಪಿಗೆ ಬಂದಿದ್ದೇನೆ. ಬಿಜೆಪಿ ಸರ್ಕಾರದ ಮೇಲೆ ನನಗೆ ವಿಶ್ವಾಸವಿದೆ. ಅದೇ ರೀತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಭರವಸೆ ಇದೆ. ನಾನು ಸಚಿವನಾಗುತ್ತೇನೆ ಎಂದು ತಿಳಿಸಿದರು.
ನನ್ನ ಮೇಲೆ ಸುಳ್ಳು ಆರೋಪ:ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕ್ಷೇತ್ರದ ಜನರು ನನ್ನನ್ನ ಗೆಲ್ಲಿಸುವ ತುಂಬು ವಿಶ್ವಾಸವಿದೆ. ನಮ್ಮಲ್ಲಿ ಯಾವುದೇ ಅಸಮಧಾನ ಇಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ. ಎಲ್ಲರೂ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + five =
Remember me
