ಮೈಸೂರು:ಹಾಸನ ಜಿಲ್ಲೆಯ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿದು, ಸಾಗಾಟ ಮಾಡಿದ ಆರೋಪದ ಮೇಲೆ ಬಂಧನವಾಗಿದ್ದ ಬಿಜೆಪಿ ಸಂಸದ ಪ್ರತಾಪ್​ ಸಿಂಹ ಅವರ ಸಹೋದರ ವಿಕ್ರಮ್​ ಸಿಂಹಗೆ ಇಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತು. ಈ ಕುರಿತಂತೆ ಕಡೆಗೂ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ತಮ್ಮ ಎಕ್ಸ್​ ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ವಿಕ್ರಂ ಸಿಂಹ ಅವರನ್ನು ಭಾನುವಾರ ತೀವ್ರ ವಿಚಾರಣೆಗೆ ಒಳಪಡಿಸಿದ ಅರಣ್ಯಾಧಿಕಾರಿಗಳು
ಸುಮಾರು 126 ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದಡಿ ವಿಕ್ರಮ್​ ಸಿಂಹ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ತಿಂಗಳ ಆರಂಭದಲ್ಲಿ ವಿಕ್ರಮ್ ಸಿಂಹ ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳಿಗೆ ವಿಸಿಟರ್​ ಪಾಸ್‌ಗಳನ್ನು ನೀಡಿ ಸಿಕ್ಕಾಪಟ್ಟೆ ಚರ್ಚೆಯಲ್ಲಿದ್ದರು. ಇದೀಗ ಮರ ಕಳ್ಳಸಾಗಾಣೆ ಪ್ರಕರಣದಲ್ಲಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಇದನ್ನೂ ಓದಿ:ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಂವಹನ ಕೌಶಲ ಮುಖ್ಯ; ವಿಜಯಲಕ್ಷ್ಮೀ ತೀರ್ಲಾಪುರ
ಇಂದು ಮರಗಳ್ಳತನ ಪ್ರಕರಣದಲ್ಲಿ ಜಾಮೀನು ಮಂಜೂರಾದ ಬೆನ್ನಲ್ಲೇ ಸಂತಸ ವ್ಯಕ್ತಪಡಿಸಿದ ವಿಕ್ರಂ ಸಿಂಹ, “ನಾನು ಯಾವುದೇ ತಪ್ಪು ಮಾಡಿಲ್ಲ. ಸತ್ಯಕ್ಕೆ ಜಯ ಸಿಕ್ಕಿದೆ. ನನಗೆ ನ್ಯಾಯ ಸಿಗಲು ನೀವೆಲ್ಲರೂ ಬೆಂಬಲಿಸಿದ್ದೀರಿ ಧನ್ಯವಾದ. ಕೇವಲ ಬೆಳೆ ಬೆಳೆಯುವ ಉದ್ದೇಶದಿಂದ ಹೋದವನಿಗೆ ಈ ತರಹದ ಆರೋಪಗಳನ್ನು ಕೇಳುವಂತಾಯಿತು. ಇದೆಲ್ಲಾ ರಾಜಕೀಯ ಪಿತೂರಿ” ಎಂದು ಹೇಳಿದರು.
ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಹಾಗು ತಲೆಮರೆಸಿಕೊಳ್ಳುವವರುತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು.
ಹಾಗು
ಕರೆ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ ಮತ್ತು ಮಾಧ್ಯಮ ಮಿತ್ರರಿಗೂ ಧನ್ಯವಾದಗಳು.
— Prathap Simha (@mepratap)December 31, 2023

ಇನ್ನು ಈ ಬಗ್ಗೆ ಟ್ವೀಟ್​ ಮಾಡಿದ ಸಂಸದ ಪ್ರತಾಪ್ ಸಿಂಹ, “ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ. ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು. ಕರೆ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ ಮತ್ತು ಮಾಧ್ಯಮ ಮಿತ್ರರಿಗೂ ಧನ್ಯವಾದಗಳು” ಎಂದು ಪೋಸ್ಟ್​ ಮಾಡಿದ್ದಾರೆ.
VIRAL VIDEO | ಅಳಿಲಿಗೆ ಬಾಟಲಿಯಿಂದ ನೀರುಣಿಸಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 7 =
Remember me
