ಬೆಂಗಳೂರು:ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್​ಐಎ ತಂಡ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೌಫೀಲ್​ ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳು ನಿನ್ನೆ (ಮಾ.4) ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ.
ಕೊಲೆ ಪ್ರಕರಣದ ಬಳಿಕೆ ತಲೆ ಮರೆಸಿಕೊಂಡಿದ್ದ ಆರೋಪಿ ತೌಫೀಲ್ ಪತ್ತೆಗಾಗಿ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು. ಅಮೃತಹಳ್ಳಿಯ ಮಾರುತಿ ಲೇಔಟ್​ನಲ್ಲಿ ನಂಜುಂಡಪ್ಪ ಎಂಬುವರ ಮನೆಯಲ್ಲಿ ತೌಫಿಲ್ ಕಳೆದ ಐದಾರು ತಿಂಗಳಿನಿಂದ ಬಾಡಿಗೆಗೆ ಇದ್ದ. ಮೂರು ಅಂತಸ್ತಿನ ಕಟ್ಟಡದ ಮೊದಲನೇ ಮಹಡಿಯಲ್ಲಿ ವಾಸವಿದ್ದ ತೌಫಿಲ್ ಯಾರ ಜತೆಗೂ ಅಷ್ಟಾಗಿ ಸೇರದೆ, ಒಬ್ಬನೇ ಇದ್ದ. ಹೀಗಾಗಿ ಯಾರೂ ಆತನನ್ನು ಅಷ್ಟಾಗಿ ಮಾತನಾಡಿಸುತ್ತಿರಲಿಲ್ಲ.
ಮಡಿಕೇರಿ ಮೂಲದ ಆರೋಪಿ ತೌಫಿಲ್ ಸದ್ಯ ಬಂಧಿಸಿರುವ ಎನ್ಐಎ ತಂಡ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − three =
Remember me
