ಹುಬ್ಬಳ್ಳಿ: ನಿಷೇಧಾಜ್ಞೆ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆಗೆ ಮುಂದಾದ ಅಲ್ಪ ಸಂಖ್ಯಾತ ಸಮುದಾಯದ ಗುಂಪನ್ನು ತಡೆದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಅವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.
ಮಂಟೂರ್ ರಸ್ತೆ ಅರಳೀಕಟ್ಟಿ ಬಡಾವಣೆಯ ಮಸೂತಿ ಬಳಿ ಅಲ್ಪಸಂಖ್ಯಾತರ ಗುಂಪು ಪೊಲೀಸರ ಮೇಲೆ ಹಲ್ಲೆ ನಡೆಸಿ ವಾಹನಗಳಿಗೆ ಕಲ್ಲು ತೂರಿದೆ. ಘಟನೆಯಲ್ಲಿ ಪೊಲೀಸ್​ ಪೇದೆ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದಾರೆ.
ಶುಕ್ರವಾರದ ಹಿನ್ನೆಲೆಯಲ್ಲಿ ಅಲ್ಪ ಸಂಖ್ಯಾತ ಸಮುದಾಯದ 40 ಮಂದಿ ಸಾಮೂಹಿಕ ಪ್ರಾರ್ಥನೆಗೆ ತೆರಳಲು ಮುಂದಾಗಿದ್ದರು. ಸಾಮೂಹಿಕ ಪ್ರಾರ್ಥನೆ ಮಾಡಲು ಮುಂದಾಗುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಕರೊನಾ ವೈರಸ್​ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿದೆ. ಹೀಗಾಗಿ ಪ್ರಾರ್ಥನೆಗೆ ಅವಕಾಶ ನೀಡದೆ ಮನೆಗೆ ಹಿಂತಿರುಗುವಂತೆ ಸೂಚಿಸಿದರು. ಇದಕ್ಕೆ ಒಪ್ಪದ ಗುಂಪು ಪ್ರಾರ್ಥನೆ ಮಾಡಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದು ಮನೆಗೆ ಕಳುಹಿಸಲು ಮುಂದಾದರು. ಇದರಿಂದ ರೊಚ್ಚಿಗೆದ್ದ ಗುಂಪು ಪೊಲೀಸರ ಮೇಲೆ ಹಲ್ಲೆ ನಡೆಸಿತು. ವಾಹನಗಳ ಮೇಲೆ ಕಲ್ಲು ತೂರಿತು.
5 ಮಂದಿ ಮಹಿಳೆಯರ ಬಂಧನ: ಹಲ್ಲೆ ನಡೆಸಿದವರಲ್ಲಿ ಮಹಿಳೆಯರು ಸೇರಿದ್ದು 5 ಮಂದಿಯನ್ನು ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ವಿವಿಧ ಕೇಸುಗಳನ್ನು ದಾಖಲಿಸಿದ್ದಾರೆ.
ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.ಇಬ್ಬರು ಪ್ರಮುಖ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪತ್ತೆಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಇನ್ನು ಮುಂದೆ ಕರೊನಾ ವೈರಸ್​ ಹೆಲ್ತ್ ಬುಲೆಟಿನ್ ಬಿಡುಗಡೆ ಜವಾಬ್ದಾರಿ ಸಚಿವ ಸುರೇಶ್​ ಕುಮಾರ್​ ಹೆಗಲಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + nine =
Remember me
