ಬೆಂಗಳೂರು:ಮಂಡ್ಯ ಹನುಮ ಧ್ವಜ ಇಳಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಕೋರಿದ್ದಾರೆ.ಕೆರೆಗೋಡು ಗ್ರಾಮ ಪಂಚಾಯಿತಿಯಿಂದ ಧ್ವಜ ಸ್ಥಂಬ ಸ್ಥಾಪನೆ ಸಂದರ್ಭದಲ್ಲಿ ಹಾಕಿದ ಷರತ್ತಿನ ಪತ್ರವನ್ನು ಬಿಡುಗಡೆ ಮಾಡಿರುವ ಸಿಎಂ, ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ ಎಂದೂ ಅಭಿಪ್ರಾಯಪಟ್ಟಿದ್ದಾರೆ.ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು ಎಂದು ಹೇಳದ್ದಾರೆ ಜತೆಗೆ ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಕರೆಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
