ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್​.ರವೀಂದ್ರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.ಬೀದರ್​ ನಿಂದ ಚಾಮರಾಜನಗರದವರೆಗೆ ಬೃಹತ್​ ಮಾನವ ಸರಪಳಿಯನ್ನು ನಿರ್ಮಿಸಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ.15 ರಂದು ಬೆಳಿಗ್ಗೆ 8.30 ರಿಂದ 9.30 ರವರೆಗೆ ರಾಜ್ಯದಾದ್ಯಂತ ಏಕ ಕಾಲಕ್ಕೆ ಆಚರಿಸಲಾಗುತ್ತಿದೆ.2500ಕಿಲೋ ಮೀಟರ್ ನ ಉದ್ದ ಮಾನವ ಸರಪಳಿಯ ನಿರ್ಮಾಣದಲ್ಲಿ25ಲಕ್ಷ ಜನರನ್ನು ಒಳಗೊಂಡ ಎಲ್ಲ ವರ್ಗದವರು ಭಾಗವಹಿಸಲಿದ್ದಾರೆ.ಇದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯ ಭಾಗಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಮೊಡಕು ಹೊಸಹಳ್ಳಿಯಿಂದ ಆರಂಭಗೊಂಡು ಕೋಲಾರ ಜಿಲ್ಲೆಯ ಗಡಿಯ ಭಾಗವಾದ ಎಚ್​.ಕ್ರಾಸ್​ ಸಮೀಪದ ಚಿಕ್ಕಗೊಂಡಹಳ್ಳಿಯವರೆಗೆ ಜಿಲ್ಲೆಯಲ್ಲಿ 47 ಕಿ.ಮೀ ಬೃಹತ್​ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತದೆ. ಇದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ತಾಲೂಕು ಅಧಿಕಾರಿಗಳಿಗೆ ಸೂಚಿಸಲಾಯಿತು.ಸಭೆಯಲ್ಲಿ ಜಿ.ಪಂ.ಸಿಇಒ ಪ್ರಕಾಶ್​ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಎನ್​.ಭಾಸ್ಕರ್​, ಅಪರ ಪೊಲೀಸ್​ ವರಿಷ್ಠಾಧಿಕಾರಿ ಆರ್​.ಐ.ಕಾಸಿಂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್​ ರೆಡ್ಡಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ ಮತ್ತಿತರರು ಇದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve − 8 =
Remember me
