ಬೆಂಗಳೂರು:ರಾಜ್ಯದ ಆಯ್ದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಸಮಗ್ರ ಶಿಕ್ಷಣ ಕರ್ನಾಟಕ ಸುತ್ತೋಲೆ ಹೊರಡಿಸಿದೆ.
2023-24 ನೇ ಸಾಲಿನಿಂದ 262 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಷರತ್ತುಗಳಿಗೊಳಪಟ್ಟು ಪ್ರಾರಂಭಿಸಲು ಶಿಕ್ಷಣ ಮಂತ್ರಾಲಯದ ಪಿ.ಎ.ಬಿಯಲ್ಲಿ ಅನುಮತಿ ನೀಡಲಾಗಿದೆ. ಈ ತರಗತಿಗಳನ್ನು ಎಲ್ಲ ಪೂರ್ವ ಸಿದ್ಧತೆ ಮಾಡಿಕೊಂಡು ಆಗಸ್ಟ್‌ನಲ್ಲಿ ಆರಂಭಿಸುವಂತೆ ತಿಳಿಸಲಾಗಿದೆ.
ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್‌ಡಿಎಂಸಿ ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಬೇಕು. ಎಲ್‌ಕೆಜಿಯ ಒಂದು ವಿಭಾಗ ಮಾತ್ರ ಪ್ರಾರಂಭಿಸಬೇಕು. ಈ ಎಲ್‌ಕೆಜಿ ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲು ಮಾಡಿಕೊಳ್ಳಬೇಕು. ಕನಿಷ್ಟ 20 ಮಕ್ಕಳು ಪ್ರವೇಶ ಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸುವುದು. ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಸಜ್ಜುಗೊಳಿಸಬೇಕು.
ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆೆ ಮಾಸಿಕ 7500 ರೂ. ಮತ್ತು ಅಯಾ ಅವರಿಗೆ ಮಾಸಿಕ 5001 ರೂ. ಸಂಭಾವನೆಯನ್ನು ನಿಗದಿಪಡಿಸಿರುವುದಾಗಿ ರಾಜ್ಯದ ಎಲ್ಲ ಡಿಸಿಪಿಐಗಳಿಗೆ ನಿರ್ದೇಶನ ನೀಡಿ ಸುತ್ತೋಲೆ ಹೊರಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 17 =
Remember me
