ಬೆಂಗಳೂರು:ಡೆಂಘೆ ನಿಯಂತ್ರಣಕ್ಕೆ ಕೇಂದ್ರ ಮಾರ್ಗಸೂಚಿ ಅನ್ವಯ ರಾಜ್ಯಾದ್ಯಂತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಾರ್ವಜನಿಕರಲ್ಲಿ ರೋಗದ ಕುರಿತು ಅರಿವು ಮೂಡಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ರೋಗ ನಿಯಂತ್ರಣ ಕ್ರಮದಲ್ಲಿ ಕೈಜೋಡಿಸುವಂತೆ ಪೌರಾಡಳಿತ ನಿರ್ದೇಶಕರಿಗೂ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಘನತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗಿ, ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದಾಗಿ ಮನೆಗಳಲ್ಲಿನ ಟ್ಯಾಂಕ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಸಂಗ್ರಹ ಮಾಡಿಕೊಳ್ಳಲಾಗುತ್ತಿದ್ದು, ಅವುಗಳನ್ನು ಸರಿಯಾದ ರೀತಿಯಲ್ಲಿ ಸಂಸ್ಕರಿಸದ ಕಾರಣ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರ ಜೊತೆಗೆ ತಾಪಮಾನದ ಏರಿಳಿತವು ಜ್ವರ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಕ್ರಿಯಾ ಯೋಜನೆ ರೂಪಿಸಲು ಸೂಚನೆ:ರಾಜ್ಯದಲ್ಲಿ ವರದಿಯಾಗಿರುವ ಒಟ್ಟು ಪ್ರಕರಣಗಳಲ್ಲಿ ಶೇ. 40 ಅಧಿಕ ಪ್ರಕರಣಗಳು ನಗರ ಪ್ರದೇಶದಲ್ಲಿ ವರದಿಯಾಗಿದೆ. ನಗರ ಪ್ರದೇಶಗಳಲ್ಲಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣವು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದ್ದರೂ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೋಗ್ಯ ಸಹಾಯಕರು ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶುಕ್ರವಾರ ನಗರ ಮತ್ತು ಪಟ್ಟಣಗಳ ಕೆಲ ಪ್ರದೇಶಗಳಲ್ಲಿ ಈಡಿಸ್ ಲಾರ್ವಾ ಸಮೀಕ್ಷೆ ನಡೆಸುತ್ತಿದ್ದಾರೆ. ಅವರು ಲಾರ್ವಾ ಉತ್ಪತ್ತಿ ತಾಣಗಳನ್ನೂ ನಾಶ ಮಾಡುತ್ತಿದ್ದಾರೆ. ಇವರೊಂದಿಗೆ ಜಿಲ್ಲೆಯ ನಗರ ಪಾಲಿಕೆ, ಪುರ ಸಭೆ, ನಗರ ಸಭೆ, ಪಟ್ಟಣ ಪಂಚಾಯಿತಿ ವಾರ್ಡ್‌ವಾರು ಕ್ರಿಯಾ ಯೋಜನೆ ಸಿದ್ಧಪಡಿಸಿ ರೋಗ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ನಿಯಂತ್ರಣಾ ಕ್ರಮಗಳು:* ಸಮರ್ಪಕ ಕುಡಿಯುವ ನೀರು ಸರಬರಾಜು ಮತ್ತು ನಿರ್ವಹಣೆ* ಘನ ತ್ಯಾಜ್ಯ ವಸ್ತುಗಳ ಶೀಘ್ರ ವಿಲೇವಾರಿ ಹಾಗೂ ನಿರ್ವಹಣೆ* ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ವಸ್ತುಗಳ ಸಂಗ್ರಹವಾಗದಂತೆ ಕ್ರಮ ವಹಿಸಲು ಸೂಚನೆ* ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಲು ನಾಗರಿಕ ನೀತಿ ಸಂಹಿತೆ ಕಟ್ಟು ನಿಟ್ಟಿನ ಅನುಷ್ಠಾನ* ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ಮತ್ತು ನಿರ್ಮೂಲನೆಗೆ ಸ್ಥಳೀಯ ಸಂಸ್ಥೆಗಳಿಂದ ಕ್ರಮ* ತುರ್ತು ಸಂದರ್ಭಗಳಲ್ಲಿ ಧೂಮೀಕರಣ ಮಾಡುವುದು* ಮನೆ, ಕಟ್ಟಡಗಳು, ವಾಣಿಜ್ಯ ಸಂಕೀರ್ಣಗಳಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ನಡೆಸಿ ನಿರ್ಮೂಲನೆ ಮಾಡುವುದು* ಸ್ಥಳೀಯ ಸಂಘ ಸಂಸ್ಥೆಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳುವುದು.* ಶಾಲಾ-ಕಾಲೇಜು, ಅಂಗನವಾಡಿ, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ಬಸ್ ಡಿಪೋ ಹಾಗೂ ರೈಲು ಮತ್ತು ವಾಹನ ನಿಲ್ದಾಣಗಳು ಸೇರಿ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ನಿರ್ಮೂಲನೆ ಮಾಡಬೇಕು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nineteen =
Remember me
