ಹಾಸನ:ಜೆಡಿಎಸ್ ಭದ್ರಕೋಟೆಯನ್ನು ಹಿಂದಿನ ಬಾರಿ ಭೇದಿಸಿದ್ದ ಬಿಜೆಪಿ ನಾಯಕ ಪ್ರೀತಂ ಗೌಡಗೆ ಈ ಬಾರಿ ದೊಡ್ಡ ಆಘಾತವೇ ಸಿಕ್ಕಿದೆ ಎನ್ನಬಹುದು. ಬಿಜೆಪಿ ನಾಯಕ ಪ್ರೀತಂ ಗೌಡ ಇದೀಗ ಜೆಡಿಎಸ್ ಅಭ್ಯರ್ಥಿ ಸ್ವರೂಪ್​ ಗೌಡ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ.
ಈ ಮೂಲಕ ಹಾಸವನ್ನು ಜೆಡಿಎಸ್​ ವಾಪಸ್ ಪಡೆದುಕೊಂಡಿದೆ ಎಂದೇ ಹೇಳಬಹುದು. ಒಮ್ಮೆ ಸೋಲಿಸಿದರೆ ಪ್ರತೀ ಬಾರಿಯೂ ಸೋಲಿಸಲು ಸಾಧ್ಯವಿಲ್ಲ, ನಾವು ನಮ್ಮ ಕ್ಷೇತ್ರವನ್ನು ವಾಪಸ್ ಪಡೆದೇ ಪಡೆಯುತ್ತೇವೆ ಎಂದು ಈ ಮೂಲಕ ಜೆಡಿಎಸ್ ಸಂದೇಶ ನೀಡಿದೆ ಎಂದೇ ಹೇಳಬಹುದು.
ಮೂರು ಬಾರಿ ಶಾಸಕರಾಗಿದ್ದ ದಿವಂಗತ ಎಚ್.ಎಸ್. ಪ್ರಕಾಶ ಅವರ ಪುತ್ರ ಸ್ವರೂಪ್ ಸುಮಾರು 8 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಅನುಕಂಪ, ಆಡಳಿತ ವಿರೋಧಿ ಅಲೆ ಕ್ಷೇತ್ರದಲ್ಲಿ ಕೆಲಸ ಮಾಡಿದೆ.
ರೇವಣ್ಣ ಕುಟುಂಬದ ಯಾರೇ ಸ್ಪರ್ಧಿಸಿದರೂ, 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ಸವಾಲು ಹಾಕಿದ್ದ ಪ್ರೀತಂ ಗೌಡ ಸೋಲು ಅನುಭವಿಸಬೇಕಾಗಿದೆ. ಅತಿಯಾದ ಆತ್ಮವಿಶ್ವಾಸ, ಅನಗತ್ಯ ಹೇಳಿಕೆಗಳಿಂದ ಗೊಂದಲ ಸೃಷ್ಟಿಸಿಕೊಂಡ ಪ್ರೀತಂ ಗೌಡ ಅವರನ್ನು ಕ್ಷೇತ್ರದ ಮತದಾರರು ತಿರಸ್ಕರಿಸಿದ್ದಾರೆ.
ದಾಸ ಒಕ್ಕಲಿಗ ಸಮುದಾಯದ ಮತಗಳು ಬಿಜೆಪಿ, ಜೆಡಿಎಸ್‌ಗೆ ಹಂಚಿಕೆಯಾಗಿದ್ದು, ಅಲ್ಪಸಂಖ್ಯಾತರ ಮತಗಳು ಸಂಪೂರ್ಣವಾಗಿ ಜೆಡಿಎಸ್ ಪರ ಬಂದಿದ್ದರಿಂದ ಸ್ವರೂಪ್ ಗೆಲುವು ಸುಲಭವಾಯಿತು.
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.
73.19 ದಾಖಲೆ ಮತದಾನ:ಈ ಬಾರಿ ದಾಖಲೆಯ ಶೇ.73.19 ಮತದಾನವಾಗಿರುವುದರಿಂದ ರಾಜಕೀಯ ಪಕ್ಷಗಳಲ್ಲಿ ನಾನಾ ರೀತಿಯ ಲೆಕ್ಕಾಚಾರಕ್ಕೆ ಇಂಬು ಮಾಡಿಕೊಟ್ಟಿದೆ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿರುವುದು ನಮಗೆ ಲಾಭ ತಂದುಕೊಡಲಿದೆ ಎಂದು ಬಿಜೆಪಿ ನಾಯಕರ ವಾದ. ಆದರೆ, ಅತಿ ಕಡಿಮೆ ಮತದಾನವಾದಾಗಲೂ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿರುವ ಉದಾಹರಣೆಗಳಿವೆ. ಅಂತೆಯೇ, ಅತೀ ಹೆಚ್ಚು ಮತದಾನವಾದಾಗಲೂ ಬಿಜೆಪಿಗೆ ಲಾಭವಾಗದಿರುವ ದಾಖಲೆಗಳೂ ನಮ್ಮ ಮುಂದಿವೆ. ಹೀಗಾಗಿ ಈ ಬಾರಿಯ ಫಲಿತಾಂಶ ಊಹೆಗೆ ನಿಲುಕದಂತಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + fourteen =
Remember me
