ಉತ್ತರಕನ್ನಡ:ಆಟೋ ರಿಕ್ಷಾ ಡಿಕ್ಕಿಯಾಗಿ ಗರ್ಭಿಣಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮದಲ್ಲಿ ಇಂದು (ಏಪ್ರಿಲ್​ 13) ನಡೆದಿದೆ.
ಶೋಭಾ ಗೋಪಾಲ ನಾಯಕ (28) ಮೃತ ದುರ್ದೈವಿ. ಶೋಭಾ ಅವರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಗಂಡನೊಂದಿಗೆ ಮನೆಯ ಎದುರಿನ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಮದುವೆಗೂ ಮುನ್ನ ನಟನೊಂದಿಗೆ ಸಂಬಂಧ: ಖುಷ್ಬೂ ಬಗ್ಗೆ ಶಾಕಿಂಗ್​ ಕಾಮೆಂಟ್​ ಮಾಡಿದ ತೆಲುಗು ನಟಿ
ಅತಿವೇಗ ಕಾರಣಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಕಾರಣ ಆಟೋ ರಿಕ್ಷಾ, ಚಾಲಕನ ನಿಯಂತ್ರಣ ತಪ್ಪಿ, ಗರ್ಭಿಣಿಗೆ ಡಿಕ್ಕಿ ಹೊಡೆಯಿತು. ಡಿಕ್ಕಿಯ ರಭಸಕ್ಕೆ ಗರ್ಭಿಣಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾಳೆ.
ಚಾಲಕ ಪರಾರಿಅಪಘಾತದ ಬಳಿಕ ರಿಕ್ಷಾ ಸಮೇತ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ರಾಷ್ಟ್ರೀಯ ಪ್ರಶಸ್ತಿ ವಿಜೇತ ಖ್ಯಾತ ನಟಿ ಉತ್ತರಾ ಬಾವೋಕರ್​ ಇನ್ನಿಲ್ಲ

ಜಾನಪದ ಗಾಯಕಿ ಮೇಲೆ ನೋಟಿನ ಸುರಿಮಳೆ: ಸಂಗ್ರಹವಾದ ಒಟ್ಟು ಮೊತ್ತ ಕೇಳಿದ್ರೆ ದಂಗಾಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
