ಕೋಲಾರ:ಒಂಬತ್ತು ತಿಂಗಳ ಹಿಂದೆ ನೂರಾರು ಕನಸಿನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿ ಶುಕ್ರವಾರ ಗಂಡನ ಮನೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ.
ಮಾಲೂರು ತಾಲೂಕಿನ ದೊಡ್ಡಕಲ್ಲಹಳ್ಳಿಯ ನವವಿವಾಹಿತೆ ಮೇಘನಾ 23 ಮೃತಳು. ಈಕೆಯ ಹೊಟ್ಟೆಯಲ್ಲಿ ನಾಲ್ಕು ತಿಂಗಳ ಭ್ರೂಣವಿತ್ತು. ಇನ್ನು ಐದು ತಿಂಗಳಲ್ಲಿ ಮಗಳೋ-ಮಗನೋ ಮನೆಗೆ ಹೊಸ ಅತಿಥಿಯಾಗಿ ಬರುತ್ತಿದ್ದರು. ಆ ಮಗುವನ್ನು ಮುದ್ದಾಡಿಕೊಂಡು ಖುಷಿಯಾಗಿರಬೇಕಿದ್ದ ಆ ಹೆಣ್ಣುಮಗಳು ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾಳೆ.ಇದನ್ನೂ ಓದಿರಿಇನ್ನೂ ಋತುಮತಿ ಆಗದ ಯುವತಿಯನ್ನು ತುಂಬಾ ಇಷ್ಟಪಟ್ಟು ಮದುವೆಯಾದ… ಬಳಿಕ ಆಗಿದ್ದೆಲ್ಲವೂ ದುರಂತ!
ಮಹೇಶ್​ ಎಂಬುವವರ ಜತೆ ಕಳೆದ 9 ತಿಂಗಳ ಹಿಂದೆ ಮೇಘನಾಳ ಮದುವೆ ಮಾಡಲಾಗಿತ್ತು. ಇನ್ನು ಕೆಲವೇ ತಿಂಗಳಲ್ಲಿ ಮೊಮ್ಮಗು ಬರುವ ನಿರೀಕ್ಷೆಯಲ್ಲಿದ್ದ ಮೇಘನಾ ಪಾಲಕರಿಗೆ ಆಕೆಯ ಸಾವು ಆಘಾತ ತಂದಿದೆ.
ಮಗಳ ಸಾವು ಆತ್ಮಹತ್ಯೆಯಲ್ಲ, ಇದು ಕೊಲೆ. ವರದಕ್ಷಿಣೆಗಾಗಿ ಗಂಡನ ಮನೆಯವರು ಕಿರುಕುಳ ಕೊಟ್ಟು ಕೊಂದಿದ್ದಾರೆ ಎಂದು ಮೇಘನಾಳ ಪೋಷಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಘನಾಳ ಪತಿ ಹಾಗೂ ಮಾವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ‌ ನಡೆಸುತ್ತಿದ್ದಾರೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದಲ್ಲಿ ಪಾರಾದರೂ ಬೆನ್ನಟ್ಟಿದ ಜವರಾಯ ಸಾಲಾಗಿ ತಾಯಿ-ಮಗ-ಮೊಮ್ಮಗನ ಪ್ರಾಣ ಹೊತ್ತೊಯ್ದ!

ಸಾಯುತ್ತಿದ್ದ ನಾಯಿಗೆ ನೀರು ಕುಡಿಸಲು ಬಂದವ ಸ್ಥಳದಲ್ಲೇ ಶವವಾದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + fourteen =
Remember me
