ಬೆಂಗಳೂರುಹೈಕೋರ್ಟ್‌ನ ವಿಭಾಗೀಯ ಪೀಠವು 2023-14ನೇ ಸಾಲಿನ 5,,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಂಕನ ನಡೆಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮಾ.11ರಿಂದ 18ರ ವರೆಗೆ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಸೇರಿ 69,137 ಶಾಲೆಗಳ 28.14 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.
5ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ಗಣಿತ ಮತ್ತು ಪರಿಸರ ಅಧ್ಯಯನ ಸೇರಿ 4 ವಿಷಯಗಳು, 8 ಮತ್ತು 9ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
5ನೇ ತರಗತಿಗೆ ಪ್ರತಿ ವಿಷಯಕ್ಕೆ 50 ಅಂಕಗಳಿಗೆ ಮೌಲ್ಯಂಕನ ನಡೆಸಲಾಗುವುದು. 40 ಅಂಕಗಳಿಗೆ ಲಿಖಿತ ಪರೀಕ್ಷೆಗೆ ರಾಜ್ಯ ಹಂತದಿಂದ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ನೀಡಲಿದೆ. ಉಳಿದ 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಬೇಕು.
8ನೇ ತರಗತಿಗೆ 60 ಅಂಕಗಳಿಗೆ ಮೌಲ್ಯಂಕನ ನಡೆಸಲಾಗುವುದು. 50 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ಶಾಲಾ ಹಂತದಲ್ಲಿಯೇ ನಡೆಸಬೇಕು.9ನೇ ತರಗತಿಗೆ ಭಾಷಾ ವಿಷಯಗಳನ್ನು (ಕನ್ನಡ, ಇಂಗ್ಲಿಷ್, ಹಿಂದಿ) 100 ಅಂಕಗಳಿಗೆ ಮತ್ತು ಕೋರ್ ವಿಷಯ (ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನ) 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಬೇಕು.
5ನೇ ತರಗತಿ ಪರೀಕ್ಷೆಗಳು ಮಾ.11ರಿಂದ 14ರ ವರೆಗೆ ಪ್ರತಿ ದಿನ ಮಧ್ಯಾಹ್ನ 2.30ರಿಂದ 4.30ರವರೆಗೆ, 8ಮತ್ತು 9ನೇ ತರಗತಿಗೆ ಮಾ.11ರಿಂದ 18ರ ವರೆಗೆ ಮಧ್ಯಾಹ್ನ ಕ್ರಮವಾಗಿ ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆ ಹಾಗೂ ಸಂಜೆ 5.15 ರವರೆಗೆ ನಡೆಯಲಿವೆ ಎಂದು ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + four =
Remember me
