ಬೆಂಗಳೂರು:ಲೋಕಮಾತೆ ಅಹಲ್ಯಾದೇವಿ ಹೋಳ್ಕರ್‌ ಅವರು ಮಾಡಿದಂತಹ ಸಮಾಜ ಸುಧಾರಣೆಗಳು ಅವಿಸ್ಮರಣೀಯ. ಅವರ ಸಮಾಜಮುಖಿ ಕಾರ್ಯಗಳನ್ನು ಇಂದು ಪ್ರತಿಯೊಬ್ಬರೂ ಮುಂದುವರಿಸಿಕೊಂಡು ಹೋಗಬೇಕಿದೆ. ಅವರ ಜೀವನ ಯುವಕರಿಗೆ ಹಾಗೂ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಲೋಕಮಾತಾ ಅಹಲ್ಯಾದೇವಿ ಹೋಳ್ಕರ್ 300ನೇ ವರ್ಷದ ಜಯಂತಿ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಚಾಲಕಿ ಎಚ್.ಜಿ.ಶೋಭಾ ಹೇಳಿದರು.
ಅಹಲ್ಯಾದೇವಿ ಹೋಳ್ಕರ್‌ ಅವರ 300ನೇ ವರ್ಷದ ಜಯಂತಿ ಪ್ರಯುಕ್ತ ಕರ್ನಾಟಕ ದಕ್ಷಿಣ ಪ್ರಾಂತದ ಸ್ವಾಗತ ಸಮಿತಿ ವತಿಯಿಂದ ಆಯೋಜಿಸಲಾಗುವ ಕಾರ್ಯಕ್ರಮಗಳ ಕುರಿತು ತಿಳಿಸುವ ಉದ್ದೇಶದಿಂದ ಬುಧವಾರ ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್​ನಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಕರ್ನಾಟಕ ದಕ್ಷಿಣ ಪ್ರಾಂತವು ಹೋಳ್ಕರ್‌ ಅವರ ತ್ರಿಶತಾಬ್ದಿವರ್ಷ ಆಚರಣೆಯ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸಲು ನಿರ್ಧರಿಸಿದೆ. ಅದರಂತೆ ಕರ್ನಾಟಕ ದಕ್ಷಿಣ ಪ್ರಾಂತದ ಎಲ್ಲಾ ಜಿಲ್ಲೆ, ತಾಲ್ಲೂಕು, ಹೋಬಳಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿ ಮುಂದಾಗಿದೆ.  ಅಹಲ್ಯಾಬಾಯಿ ಅವರು ಆಧ್ಯಾತ್ಮಿಕ, ರಾಜಕೀಯ , ಸಾಮಾಜಿಕ , ಶಿಕ್ಷಣ ಕ್ಷೇತ್ರಗಳಲ್ಲಿ ಮಾಡಿದ ಸೇವೆಗಳನ್ನು ಯುವಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ತಿಳಿಸಿಕೊಡವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಶಾಲೆ ವಿದ್ಯಾರ್ಥಿನಿಯರಿಗೆ, ಶಿಕ್ಷಕರಿಗೆ ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಅಹಲ್ಯಾಬಾಯಿ ಹೋಳ್ಕರ್ ಅವರ ಬಗ್ಗೆ ಕಾರ್ಯಕ್ರಮದ ಮೂಲಕ ತಿಳಿಸಲಾಗುತ್ತದೆ. ಅಷ್ಟೇ ಅಲ್ಲದೆ ಸಾರ್ವಜನಿಕರಿಗೆ ಅವರ ಜೀವನವನ್ನು ಪರಿಚಯಿಸುವ ದೃಷ್ಟಿಯಿಂದ ಬೀದಿ ನಾಟಕ, ಲಲಿತ ಸಹಸ್ರನಾಮ ಮತ್ತು ಸೌಂದರ್ಯ ಲಹರಿ ಗುಂಪುಗಳಲ್ಲಿ ಜಾಗೃತಿ, ಮಹಿಳಾ ಕೋ ಅಪರೇಟಿವ್‌ ಸೊಸೈಟಿಗಳಲ್ಲಿ, ಯೋಗಕೇಂದ್ರಗಳಲ್ಲಿ ಕಥೆ, ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳ ಆಯೋಜನೆ, ಬೈಕ್‌ ರ್ಯಾಲಿ, ಗಿಡ ನಡೆಯುವುದು, ದೇವಸ್ಥಾನಗಳ ಜೀರ್ಣೋದ್ಧಾರ, ಶಿಕ್ಷಕರಿಂದ ಬೇರೆ ಬೇರೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಉಪನ್ಯಾಸ ನಡೆಸುವುದು, ಶಿಕ್ಷಣ ಕ್ಷೇತ್ರ ಮತ್ತು ಧಾರ್ಮಿಕ ಕ್ಷೇತ್ರ, ನೇಕಾರರ ಕ್ಷೇತ್ರಗಳಲ್ಲಿನ ಸಾಧಕರಿಗೆ ಅಹಲ್ಯಾದೇವಿ ಹೆಸರಿನಲ್ಲಿ ಗೌರವ ಸಮರ್ಪಣೆ , ಹೆಣ್ಣುಮಕ್ಕಳಿಗೆ ಸ್ಕಾಲರ್‌ ಶಿಪ್‌ ನೀಡುವುದು, ಸ್ವರಕ್ಷಣೆಯ ಬಗ್ಗೆ ಶಾಲೆಗಳಲ್ಲಿ ತರಬೇತಿ ಹಾಗೂ ಅಪಾರ್ಟ್‌ಮೆಂಟ್‌ ಗಳಲ್ಲಿ ಮಕ್ಕಳಿಗೆ, ತಾಯಂದಿರಿಗೆ ಚಿಂತನ ಮಂಥನ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ವಿವರಿಸಿದರು.
ಲೋಕಮಾತಾ ಅಹಲ್ಯಾದೇವಿ ಹೋಳ್ಕರ್ 300ನೇ ಜಯಂತಿಯ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಚಾಲಕಿ ಛಾಯಾಪ್ರಭು ಮಾತನಾಡಿ, ಅಹಲ್ಯಾಬಾಯಿ ಅವರು ಶಿಕ್ಷಣದಲ್ಲಿ ಪ್ರತಿಭಾನ್ವಿತೆ, ಸಮಾಜದ ಏಳಿಗೆಗಾಗಿ ಶ್ರಮಿಸಿದವರು. ಹೀಗಾಗಿ ಅವರ ಕುರಿತು ಜನರಿಗೆ ತಿಳಿಸುವ ಕುರಿತು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ‌. ಈ ಕಾರ್ಯಕ್ರಮಗಳು ಸೆಪ್ಟೆಂಬರ್‌ ನಿಂದ ನವೆಂಬರ್‌ ವರೆಗೆ ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಯಲಿದೆ‌. ಈ ಸಂದರ್ಭದಲ್ಲಿ ಕಾರ್ಯಕರ್ತರು ವಿವಿಧ ರೀತಿಯ ಕಾರ್ಯಕ್ರಮಗಳ ಆಯೋಜನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಜನರಿಗೆ ಲೋಕಮಾತಾ ಅಹಲ್ಯಾದೇವಿ ಹೋಳ್ಕರ್ ಅವರ ಕುರಿತು ವಿಷಯ ತಲುಪಿಸಲು ಕಾರ್ಯಪ್ರವೃತ್ತರಾಗಬೇಕಿದೆ ಎಂದರು.
ಸಾಮರಸ್ಯ ವಿಭಾಗದ ಲಕ್ಷ್ಮೀನಾರಾಯಣ ಮಾತನಾಡಿ, ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಅಹಲ್ಯಾದೇವಿ ಹೋಳ್ಕರ್. ಈಗಾಗಲೇ 30 ಜಿಲ್ಲಾ ಕೇಂದ್ರಗಳಲ್ಲಿ ಹೋಳ್ಕರ್‌ ಅವರು ಮಾಡಿರುವ ಕೆಲಸಗಳನ್ನು ತಿಳಿಸುವ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಸುಮಾರು ಸಾವಿರ ಕಾಲೇಜುಗಳಲ್ಲಿ ಕಾರ್ಯಕ್ರಮ ಆಯೋಜಿಸುವ ನಿರ್ಧಾರ ಮಾಡಲಾಗಿದೆ. ಮೈಸೂರು, ಮಂಗಳೂರು, ಶಿವಮೊಗ್ಗ, ಹಾಸನ, ಕೋಲಾರ, ತುಮಕೂರು,  ಬೆಂಗಳೂರು ಉತ್ತರ ಮತ್ತು ದಕ್ಷಿಣ ಎಂಟು ವಿಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
